ರಾಜ್ಯದಲ್ಲಿ ಮಂಗನಕಾಯಿಲೆ ಉಲ್ಬಣ: ಮತ್ತೆ ಒಬ್ಬರಿಗೆ ಸೋಂಕು ದೃಢ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮಂಗನಕಾಯಿಲೆ ಉಲ್ಬಣಗೊಳ್ಳುತ್ತಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ ಒಬ್ಬರಿಗೆ ಮಂಗನಕಾಯಿಲೆ ದೃಢಪಟ್ಟಿದೆ. ಹೀಗಾಗಿ ಒಟ್ಟು ಪಾಸಿಟಿವ್ ಪ್ರಕರಣ 65ಕ್ಕೆ ಏರಿಕೆಯಾಗಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಮೂವರನ್ನು ಕೆಎಫ್ ಡಿ ಪರೀಕ್ಷೆಗೆ ಒಳಪಡಿಸಲಾಗಿದೆ.

ಅವರಲ್ಲಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರಾದಂತ ಇಬ್ಬರು ಡಿಸ್ಚಾರ್ಜ್ ಆಗಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ 37 ಮಂದಿಗೆ ಮಂಗನಕಾಯಿಲೆಯಿಂದ ಬಳಲುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!