ಭಾರೀ ಭೂಕುಸಿತ:‌ ಹಿಮಾಚಲದ ಮಂಗ್ಲಾದ್-ಬಗ್ವತ್ ರಸ್ತೆ ಬಂದ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರೀ ಮಳೆಯಿಂದಾಗಿ ಹಿಮಾಚಲಪ್ರದೇಶದಲ್ಲಿ ಭೂಕುಸಿತ ಘಟನೆಗಳು ಇನ್ನೂ ನಿಂತಿಲ್ಲ.

ಭಾರೀ ಭೂಕುಸಿತದಿಂದಾಗಿ ಶಿಮ್ಲಾ ಜಿಲ್ಲೆಯ ಮಂಗಲ್-ಬಗ್ವತ್ ರಸ್ತೆಯನ್ನು ಭಾನುವಾರದಿಂದ ಮುಚ್ಚಲಾಗಿದ್ದು, ವಾಹನ ಸಂಚಾರ ಬಂದ್‌ ಆಗಿದೆ. ಪೊಲೀಸರ ಪ್ರಕಾರ, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ವಸ್ತುಹಾನಿ ಬಗ್ಗೆ ತಕ್ಷಣದ ವರದಿಯಾಗಿಲ್ಲ. ಇಂದೂ ಕೂಡ ಭೂಕುಸಿತ ಮುಂದುವರಿದಿದ್ದು, ತೆರವು ಕಾರ್ಯಾಚರಣೆಗೆ ಅಡಚಣೆಯಾಗಿದೆ. ಜನರು ಆ ಕಡೆ ಹೋಗದಂತೆ ಕಟ್ಟೆಚ್ಚರ ವಹಿಸಲಾಗಿದೆ.

ಘಟನೆಯ ವಿಡಿಯೋ ಕ್ಲಿಪ್ ವೈರಲ್ ಆಗಿದ್ದು, ಬಂಡೆಗಳು ಬೆಟ್ಟದಿಂದ ಕಣಿವೆಗೆ ಬೀಳುತ್ತಿರುವುದನ್ನು ನೋಡಬಹುದು. ಸ್ಥಳೀಯರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ದೃಶ್ಯಗಳನ್ನು ಲೈವ್ ಆಗಿ ರೆಕಾರ್ಡ್ ಮಾಡಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!