ತುಳುವಿಗೆ ಎಂಟ್ರಿ ಕೊಟ್ಟ ಮಂಗ್ಲಿ: ಬಿರ್ದ್‌ದ ಕಂಬಳದಲ್ಲಿ ಹಾಡಲಿದ್ದಾರೆ ‘ಕಣ್ಣೀ ಅದಿರಿಂದಿ’ ಖ್ಯಾತಿಯ ಗಾಯಕಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ಕಣ್ಣೀ ಅದಿರಿಂದಿ’ ಎನ್ನುವ ಮೂಲಕ ಎಲ್ಲರ ಮನೆ ಮಾತಾದ ಗಾಯಕಿ ತೆಲುಗಿನ ಮಂಗ್ಲಿ. ಈಗಾಗಲೇ ಅನೇಕ ಕನ್ನಡ ಹಾಡುಗಳನ್ನು ಹಾಡುವ ಮೂಲಕ ಜನಪ್ರಿಯ ಪಡೆದಿದ್ದಾರೆ.

ಇದೀಗ ಮಂಗ್ಲಿ ಮೊದಲ ಬಾರಿ ತುಳು ಸಿನಿಮಾವೊಂದರ ಹಾಡಿಗೆ ಧ್ವನಿಯಾಗಿದ್ದಾರೆ.ತುಳು ಜನತೆಯ ಮನಗೆಲ್ಲಲು ಸಜ್ಜಾಗಿದ್ದಾರೆ.

ಎ.ಆರ್ ಪ್ರೊಡಕ್ಷನ್ಸ್ ಬ್ಯಾನರ್‌ನಡಿ ಅರುಣ್ ರೈ ತೋಡಾರ್ ನಿರ್ಮಾಣ, ಎಸ್.ವಿ.ಬಾಬು ರಾಜೇಂದ್ರ ಸಿಂಗ್ ನಿರ್ದೇಶನದ ‘ಬಿರ್ದ್‌ದ ಕಂಬಳ’ ಮತ್ತು ‘ಕನ್ನಡದ ವೀರ ಕಂಬಳ’ ಸಿನಿಮಾಕ್ಕೆ ಹಾಡಿದ್ದಾರೆ. ತುಳು ಮತ್ತು ಕನ್ನಡ ಎರಡೂ ಭಾಷೆಯಲ್ಲೂ ಹಾಡು ಹಾಡಿರುವುದು ವಿಶೇಷ. ತುಳುವಿನ ಕೆ.ಕೆ.ಪೇಜಾವರ, ಕನ್ನಡದ ರಘು ಶಾಸ್ತ್ರಿ ಅವರ ಸಾಹಿತ್ಯಕ್ಕೆ ಕದ್ರಿ ಮಣಿಕಾಂತ್ ಸಂಗೀತ ನೀಡಿದ್ದಾರೆ.

ಕನ್ನಡದಲ್ಲಿ ರಾಬರ್ಟ್ ಸಿನಿಮಾದ ಕಣ್ಣೆ ಅದರಂದಿ ಹಾಡಿನ ಮೂಲಕ ಸ್ಯಾಂಡಲ್‌ವುಡ್ ಪ್ರವೇಶ ಮಾಡಿದ ಮಂಗ್ಲಿ, ಬಳಿಕ ಜೋಗಿ ಏಕ್ ಲವ್ ಯಾ ಚಿತ್ರದ ಎಣ್ಣೆಗೂ ಹೆಣ್ಣಿಗೂ ಗೀತೆಗೂ ದನಿಯಾದರು. ನಂತರ ಪುಷ್ಪಾ ಸಿನಿಮಾದ ಕನ್ನಡದ ಡಬ್ಬಿಂಗ್ ಸಿನಿಮಾದಲ್ಲಿ ಐಟಂ ಸಾಂಗ್‌ಗೂ ಮಂಗ್ಲಿ ಹಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!