ಮನೀಸ್‌ ಸಿಸೋಡಿಯಾಗೆ ತಪ್ಪದ ಸಂಕಷ್ಟ: ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಎಸಗಿದ ಆರೋಪದಲ್ಲಿ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸುತ್ತಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಸ್‌ ಸಿಸೋಡಿಯಾಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಮೇ 23 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ.

ಮನೀಶ್‌ ಸಿಸೋಡಿಯಾ ದೆಹಲಿಯಲ್ಲಿ ಅಬಕಾರಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಸಮಯದಲ್ಲಿ ಈ ಹಗರಣ ನಡೆದಿತ್ತು ಎಂದು ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ಶನಿವಾರ ಇಡಿ ಸಲ್ಲಿಸಿದ ಅರ್ಜಿಯ ಬಳಿಕ ಕೋರ್ಟ್‌ ಈ ತೀರ್ಪು ನೀಡಿದೆ.

ಮನೀಶ್ ಸಿಸೋಡಿಯಾ ವಿರುದ್ಧ ಮೊದಲ ಬಾರಿಗೆ ಇಡಿ ಗುರುವಾರ 2,000 ಪುಟಗಳ ಆರೋಪಪಟ್ಟಿ ಸಲ್ಲಿಕೆ ಮಾಡಿದೆ.ಈ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಮಾರ್ಚ್ 9 ರಂದು ತಿಹಾರ್ ಜೈಲಿನಿಂದ ಇಡಿ ಬಂಧಿಸಿದ್ದು, ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಆಮ್ ಆದ್ಮಿ ಪಕ್ಷದ ನಾಯಕನನ್ನು ಮೊದಲು ಸಿಬಿಐ ಬಂಧಿಸಿದ್ದು, ಪ್ರಕರಣದ ತನಿಖೆಯನ್ನೂ ನಡೆಸುತ್ತಿದೆ. ಇದು ದೆಹಲಿಯ ವಿಶೇಷ ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್ (ಪಿಎಂಎಲ್‌ಎ) ನ್ಯಾಯಾಲಯದ ಮುಂದೆ ಇಡಿ ಸಲ್ಲಿಸಿದ ನಾಲ್ಕನೇ ಪೂರಕ ಮತ್ತು ಒಟ್ಟಾರೆ ಐದನೇ ಚಾರ್ಜ್‌ಶೀಟ್ ಅಥವಾ ಪ್ರಾಸಿಕ್ಯೂಷನ್ ದೂರು ಮಾಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!