Tuesday, March 21, 2023

Latest Posts

ತ್ರಿಪುರಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಣಿಕ್ ಸಹಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಭಾರತೀಯ ಜನತಾ ಪಕ್ಷದ ಮಾಣಿಕ್ ಸಹಾ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಸತತ ಎರಡನೇ ಬಾರಿಗೆ ತ್ರಿಪುರಾದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಇನ್ನು ಎಂಟು ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಫೆಬ್ರವರಿ 16 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ ಮಾಣಿಕ್ ಸಹಾ ಅವರು ಇಂದು ತ್ರಿಪುರಾ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಅಗರ್ತಲಾದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಭಾಗವಹಿಸಿದ್ದರು. ಅವರ ಜೊತೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಮತ್ತು ಬಿಜೆಪಿಯ ಈಶಾನ್ಯ ಯಶಸ್ಸಿನ ಶಿಲ್ಪಿ ಹಿಮಂತ ಬಿಸ್ವಾ ಶರ್ಮಾ ಕೂಡ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!