ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಹಲವು ದಿನಗಳಿಂದ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಪ್ರಾಣ ಕಳೆದುಕೊಂಡವ ಕುಟುಂಬದವರಿಗೆ ಕೇಂದ್ರ ಹಾಗೂ ಮಣಿಪುರ ರಾಜ್ಯ ಸರ್ಕಾರ ಮಂಗಳವಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ.
ಅಲ್ಲದೆ ಮೃತರ ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗ ನೀಡಲಾಗುವುದು. ಪರಿಹಾರದ ಮೊತ್ತವನ್ನು ಕೇಂದ್ರ ಹಾಗೂ ರಾಜ್ಯ ಸಮಾನವಾಗಿ ಭರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಸಭೆ ನಡೆಸಿದ್ದು, ಈ ವೇಳೆ ಪರಿಹಾರವನ್ನು ಘೋಷಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಈ ಮೂಲಕ ಕಳೆದ 1 ತಿಂಗಳಲ್ಲಿ ಸಾವಿನ ಸಂಖ್ಯೆ 80ಕ್ಕೆ ಏರಿಕೆಯಾಗಿದೆ. ಮೇ 31ರ ವರೆಗೂ ರಾಜ್ಯಾದ್ಯಂತ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.