ಹೊಸದಿಗಂತ ಡಿಜಿಟಲ್ ಡೆಸ್ಕ್
ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಣಿಪುರ ರಾಜಧಾನಿ ಇಂಫಾಲದ ರಾಜಭವನದಲ್ಲಿ ರಾಜ್ಯಪಾಲ ಅಜಯ್ ಕುಮಾರ್ ಭಲ್ಲ ಅವರಿಗೆ ಬಿರೇನ್ ಸಿಂಗ್ ರಾಜೀನಾಮೆ ಪತ್ರ ಸಲ್ಲಿಸಿರುವುದು ತಿಳಿದುಬಂದಿದೆ.
ಮೂಲಗಳ ಪ್ರಕಾರ, ಸಿಂಗ್ ನಾಯಕತ್ವದ ಬಗ್ಗೆ ಅತೃಪ್ತರಾಗಿರುವ ಬಿಜೆಪಿ ಶಾಸಕರ ಬೆಂಬಲ ಪಡೆಯುವ ವಿಶ್ವಾಸ ಕಾಂಗ್ರೆಸ್ಗಿದೆ ಇದರಿಂದ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸುವು ಸಾಧ್ಯತೆಯಿದೆ ಎಂದು ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಅವರು ಕೇಂದ್ರ ಸರ್ಕಾರಕ್ಕೆ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದರು ಎನ್ನಲಾಗಿದೆ.
ಇದಕ್ಕೂ ಮುನ್ನ ವಿರೋಧ ಪಕ್ಷವಾದ ಕಾಂಗ್ರೆಸ್ ಮಣಿಪುರ ವಿಧಾನಸಭೆಯಲ್ಲಿ ಬಿರೇನ್ ಸಿಂಗ್ ನೇತೃತ್ವದ ಸರ್ಕಾರದ ವಿರುದ್ಧ ಶೀಘ್ರದಲ್ಲೇ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ತಿಳಿಸಿತ್ತು.
ಇದಕ್ಕೂ ಮುನ್ನ ಎನ್ ಬಿರೇನ್ ಸಿಂಗ್ ಅವರು, ಇಂದು ಬೆಳಿಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿಯಾಗಿದ್ದರು. ಇದಾದ ಬಳಿಕ ಸಿಂಗ್ ಅವರು ರಾಜೀನಾಮೆ ನೀಡಿದ್ದಾರೆ.