ಮ್ಯಾನ್ಮಾರ್‌ನಿಂದ ಅಕ್ರಮ ಒಳನುಸುಳುವಿಕೆ ತಡೆಗೆ ಮಣಿಪುರ ಸರ್ಕಾರ ಹೊಸಾ ಪ್ಲ್ಯಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮ್ಯಾನ್ಮಾರ್‌ನಿಂದ ಅಕ್ರಮ ವಲಸೆ ತಡೆಯುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಹೆಚ್ಚಿನ ಪೊಲೀಸ್ ಹೊರಠಾಣೆಗಳನ್ನು ಸ್ಥಾಪಿಸಲು ಮಣಿಪುರ ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಮಾಹಿತಿ ನೀಡಿದ್ದು, ಭಾರತ ಮ್ಯಾನ್ಮಾರ್ ಗಡಿಯಲ್ಲಿ ಜೆಸಾಮಿ ಮತ್ತು ಬೆಹಿಯಾಂಗ್ ನಡುವೆ 34 ಹೊಸ ಪೊಲೀಸ್ ಹೊರಠಾಣೆಗಳನ್ನು ಸ್ಥಾಪಿಸುವ ಪ್ರಸ್ತಾವನೆ ಅನುಮೋದಿಸಲಾಗಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದ ನಂತರ 539 ಎಕರೆಯಲ್ಲಿ ಬೆಳೆಯಲಾಗಿದ್ದ ಗಾಂಜಾ ಬೆಳೆ ನಾಶಪಡಿಸಲಾಗಿದೆ. 432 ಜನರನ್ನು ಬಂಧಿಸಲಾಗಿದೆ. ಜತೆಗೆ 818 ಕೋಟಿ ರೂ. ಮೌಲ್ಯದ ಮಾದಕವಸ್ತು ವಶಪಡಿಸಿಕೊಳ್ಳಲಾಗಿದೆ ಎಂದೂ ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!