ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಂಸಾಚಾರ ಪೀಡಿತ ಮಣಿಪುರಲ್ಲಿ ಇಂದಿನಿಂದ ಶಾಲೆಗಳು ಪ್ರಾರಂಭವಾಗಲಿವೆ. ರಾಜ್ಯದಲ್ಲಿ ಒಂದರಿಂದ ಎಂಟರವರೆಗಿನ ತರಗತಿಗಳು ಆರಂಭವಾಗಲಿವೆ ಎಂದು ಮುಖ್ಯಮಂತ್ರಿ ಬಿರೇನ್ ಸಿಂಗ್ ಮಾಹಿತಿ ನೀಡಿದ್ದಾರೆ.
ಮಣಿಪುರದಲ್ಲಿ ಮೈತೇಯಿ ಸಮುದಾಯವನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸುವ ಪ್ರಸ್ತಾಪವನ್ನು ವಿರೋಧಿಸಿ ಕುಕಿ ಸಮುದಾಯವು ಪ್ರತಿಭಟನೆ ಪ್ರಾರಂಭಿಸಿತ್ತು. ಇದು ಹಿಂಸಾಚಾರಕ್ಕೆ ತಿರುಗಿತ್ತು, ಅದರಿಂದಾಗಿ ಈವರೆಗೆ 114 ಮಂದಿ ಮೃತಪಟ್ಟಿದ್ದು, 40,000 ಮಂದಿ ನಿರಾಶ್ರಿತರಾಗಿದ್ದಾರೆ.
ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದರಿಂದ ಮೇ ಮೊದಲ ವಾರದಿಂದಲೇ ಶಾಲೆಗಳು ಮುಚ್ಚಿದ್ದವು. ಈಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಹಿನ್ನೆಲೆಯಲ್ಲಿ ಶಾಲೆಗಳನ್ನು ಮತ್ತೆ ತೆರೆಯಲು ನಿರ್ಧರಿಸಲಾಗಿದೆ.
ಸೂಕ್ಷ್ಮ ಪ್ರದೇಶಗಳಲ್ಲಿ ರಾಜ್ಯ ಭದ್ರತಾ ಪಡೆ ಹಾಗೂ ಅರೆಸೇನಾ ಪಡೆಗಳನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ.
ಐದು ಜಿಲ್ಲೆಗಳಲ್ಲಿ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ.