ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ಮಣಿಪುರದ ಜಿರಿಬಾಮ್‌ನಿಂದ ನಾಪತ್ತೆಯಾಗಿದ್ದ 6 ಮಂದಿ ನಾಪತ್ತೆಯಾಗಿದ್ದರು. ಈ ಪೈಕಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳ ಮೃತದೇಹ ಜಿರಿಬಾಮ್ ಜಿಲ್ಲೆಯ ಬೊರೊಬೆಕ್ರಾದಿಂದ 16 ಕಿಮೀ ದೂರದ ನದಿಯಲ್ಲಿ ಪತ್ತೆಯಾಗಿತ್ತು.
ಈ ಬೆನ್ನಲ್ಲೇ ಭಾನುವಾರ ಬೆಳಗ್ಗೆ ರುಂಡವಿಲ್ಲದ ಮತ್ತೊಂದು ಮಹಿಳೆಯ ಮೃತದೇಹ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದೆ, ಜೊತೆಗೆ ಉಗ್ರರು ಒತ್ತೆಯಾಳಾಗಿ ಇರಿಸಿದ್ದರು ಎನ್ನಲಾದ 2 ವರ್ಷದ ಮಗುವಿನ ದೇಹವು ಪತ್ತೆಯಾಗಿದೆ ಎಂದು ವರದಿಯಾಗಿದೆ.
ಜಿರಿಬಾಮ್ ಜಿಲ್ಲೆಯ ಗಡಿಯಲ್ಲಿರುವ ಬರಾಕ್ ನದಿಯಲ್ಲಿ ತೇಲಿಬರುತ್ತಿದ್ದ ಮೃತದೇಹವನ್ನು ಅಸ್ಸಾಂನ ಕ್ಯಾಚರ್ ಜಿಲ್ಲೆಯ ಪೊಲೀಸರು ಪತ್ತೆಹಚ್ಚಿದ್ದಾರೆ. ಆದ್ರೆ ಮೃತದೇಹದ ಗುರುತು ಇನ್ನೂ ಪತ್ತೆಯಾಗಿಲ್ಲ. ಒಟ್ಟಿನಲ್ಲಿ ನಾಪತ್ತೆಯಾದ 6 ಮಂದಿಯಲ್ಲಿ ಇವರೂ ಒಬ್ಬರೆಂದು ಶಂಕಿಸಲಾಗಿದೆ. 4ನೇ ಮೃತದೇಹ ಪತ್ತೆಯಾದ ಬೆನ್ನಲ್ಲೇ ಮಣಿಪುರದಲ್ಲಿ ಉದ್ವಿಗ್ನತೆ ಮತ್ತೆ ಹೆಚ್ಚಾಗಿದೆ