Saturday, December 9, 2023

Latest Posts

ಮಣಿಪುರ | ಕೇಂದ್ರ ಸಚಿವ ರಂಜನ್ ಸಿಂಗ್ ಮನೆ ಮೇಲೆ ಮತ್ತೆ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಕೇಂದ್ರ ಸಚಿವ ರಂಜನ್ ಸಿಂಗ್ ಅವರ ಮನೆ ಮೇಲೆ ಮತ್ತೆ ದಾಳಿ ನಡೆದಿದೆ.

ರಂಜನ್ ಸಿಂಗ್ ಅವರ ಇಂಫಾಲ್ ನಿವಾಸದ ಮೇಲೆ ಎರಡು ತಿಂಗಳ ಬಳಿಕ ಇದು ಎರಡನೇ ಬಾರಿಗೆ ದಾಳಿಯಾಗಿದೆ .

ರಾಜ್ಯದ ಪರಿಸ್ಥಿತಿಯ ಬಗ್ಗೆ ಸಂಸತ್ತಿನಲ್ಲಿ ಮಾತನಾಡಬೇಕು, ಇಂಟರ್ನೆಟ್ ಸೇವೆಗಳನ್ನು ಮರುಸ್ಥಾಪಿಸಲು ಒತ್ತಾಯಿಸಿ ರ್ಯಾಲಿ ಕೈಗೊಂಡಿದ್ದು, ಈ ವೇಳೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ದಾಳಿಯ ವೇಳೆ ಸಚಿವರ ಮನೆಯಲ್ಲಿ ಯಾರೂ ಇರಲಿಲ್ಲ. ಹೆಚ್ಚಿನ ಹಾನಿಯಾಗಿಲ್ಲ.ಭದ್ರತಾ ಸಿಬ್ಬಂದಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.

ಜೂನ್ 15 ರಂದು, ಗುಂಪೊಂದು ಸಚಿವರ ನಿವಾಸದ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಲು ಯತ್ನಿಸಿದ ನಂತರ ಭದ್ರತಾ ಸಿಬ್ಬಂದಿ ಮತ್ತು ಅಗ್ನಿಶಾಮಕ ಸಿಬ್ಬಂದಿ ಬೆಂಕಿಯ ಯತ್ನಗಳನ್ನು ನಿಯಂತ್ರಿಸಿ ಮನೆಯನ್ನು ಉಳಿಸುವಲ್ಲಿ ಯಶಸ್ವಿಯಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!