ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಉಲ್ಲೇಖಿಸಿರುವ ಆರು ಪ್ರಕರಣಗಳ ತನಿಖೆಗಾಗಿ ಸಿಬಿಐ ಡಿಐಜಿ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ 10 ಸದಸ್ಯರ ವಿಶೇಷ ತನಿಖಾ ತಂಡವನ್ನು(ಎಸ್ಐಟಿ) ರಚಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರು ಆರು ಎಫ್ಐಆರ್ಗಳ ಮೇಲೆ ಸಿಬಿಐ ತನಿಖೆ ನಡೆಸುವುದಾಗಿ ಈಶಾನ್ಯ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ,ಘೋಷಿಸಿದ್ದರು.
ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಜಂಟಿ ನಿರ್ದೇಶಕ ಘನಶ್ಯಾಮ್ ಉಪಾಧ್ಯಾಯ ಅವರನ್ನು ರಾಜ್ಯದ ಅಧಿಕಾರಿಗಳೊಂದಿಗೆ ಚರ್ಚಿಸಲು ಮಣಿಪುರಕ್ಕೆ ಕಳುಹಿಸಿತ್ತು. ಅವರು ಹಿಂದಿರುಗಿದ ನಂತರ, ಎಸ್ಐಟಿಯನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇದೀಗ ಆರು ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಬಿಐ ಮತ್ತೊಮ್ಮೆ ಕೇಸ್ ದಾಖಲಿಸಿಕೊಂಡಿದೆ. ಕೋಲ್ಕತ್ತಾದ ವಿಶೇಷ ಅಪರಾಧ ವಿಭಾಗವು ಪ್ರಕರಣಗಳ ತನಿಖೆ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.