ಮಣಿಪುರ ಹಿಂಸಾಚಾರ: ಉನ್ನತ ಮಟ್ಟದ ಸಭೆ ನಡೆಸಿದ ಗೃಹ ಸಚಿವ ಅಮಿತ್ ಶಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಣಿಪುರ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಮಹತ್ವದ ಸಭೆ ನಡೆಸಿದರು.

ಈ ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಇಂಟೆಲಿಜೆನ್ಸ್ ಬ್ಯೂರೋ ಮುಖ್ಯಸ್ಥ ತಪನ್ ದೇಕಾ, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ, ಜಿಒಸಿ ತ್ರೀ ಕಾರ್ಪ್ಸ್ ಎಚ್​​.ಎಸ್​​.ಸಾಹಿ, ಮಣಿಪುರ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್, ಮಣಿಪುರ ಮುಖ್ಯ ಕಾರ್ಯದರ್ಶಿ ವಿನೀತ್ ಜೋಶಿ, ಮಣಿಪುರ ಮುಖ್ಯ ಕಾರ್ಯದರ್ಶಿ ಡಿಜಿಪಿ ರಾಜೀವ್ ಸಿಂಗ್ ಮತ್ತು ಅಸ್ಸಾಂ ರೈಫಲ್ಸ್ ಡಿಜಿ ಪ್ರದೀಪ್ ಚಂದ್ರನ್ ನಾಯರ್ ಹಾಜರಿದ್ದರು.

ಮಣಿಪುರ ರಾಜ್ಯಪಾಲರಾದ ಅನುಸೂಯಾ ಉಕೆ ಅವರು ಭಾನುವಾರ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ರಾಜ್ಯದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ ಒಂದು ದಿನದ ನಂತರ ಈ ಸಭೆ ನಡೆದಿದೆ.

ಕಳೆದ ವರ್ಷ ಮೇ 3ರಂದು ಮಣಿಪುರದಲ್ಲಿ ಆರಂಭವಾದ ಹಿಂಸಾಚಾರ ಇನ್ನೂ ಸಂಪೂರ್ಣವಾಗಿ ಅಂತ್ಯಗೊಂಡಿಲ್ಲ. ಎರಡು ಸಮುದಾಯಗಳಾದ ಕುಕಿ ಮತ್ತು ಮೈತೆಯಿ ನಡುವೆ ಸಂಘರ್ಷ ನಡೆಯುತ್ತಿದೆ. ಇದರಲ್ಲಿ ಕನಿಷ್ಠ 225 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಸುಮಾರು 50,000 ಜನರು ನಿರಾಶ್ರಿತರಾಗಿದ್ದಾರೆ.

ಇನ್ನು ಮಣಿಪುರದ ಹಿಂಸಾಚಾರವನ್ನು ತಡೆಯುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಲ್ಲ ಪ್ರಯತ್ನಗಳನ್ನು ನಡೆಸುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!