ಹೊಸದಿಗಂತ ವರದಿ ಕಲಬುರಗಿ:
ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಹಾಗೂ ಗಲಾಟೆಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಮುಖ್ಯ ಕಾರಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾರಂಭದ ಹಂತದಲ್ಲೆ ಗಲಾಟೆ ಕಂಟ್ರೋಲ್ ಮಾಡಿದ್ದರೆ, ಇಷ್ಟೊಂದು ಪ್ರಮಾಣದಲ್ಲಿ ಜೀವ ಹಾನಿ, ಮನೆ ಹಾನಿ ಹಾಗೂ ಆಸ್ತಿ ಪಾಸ್ತಿ ಹಾನಿಯಾಗುತ್ತಿರಲಿಲ್ಲ. ತ್ವರಿತ ಕ್ರಮ ಕೈಗೊಳ್ಳದ ಕಾರಣ ಇಂತಹ ಕೆಟ್ಟ ಪರಿಸ್ಥಿತಿ ಬಂದಿದೆ ಎಂದು ಹೇಳಿದರು.
ಜೀವ ಕಳೆದುಕೊಂಡ ಕುಟುಂಬದವರಿಗೆ, ಮನೆ ಆಸ್ತಿ ಪಾಸ್ತಿ ಕಳೆದುಕೊಂಡವರಿಗೆ ಪುನರ್ವಸತಿ ಪರಿಹಾರವೂ ವಿಳಂಬವಾಗುತ್ತಿದೆ. ಈ ಬಗ್ಗೆ ನಾವು ರಾಷ್ಟ್ರಪತಿ ಬಳಿ ನಿಯೋಗ ತೆಗೆದುಕೊಂಡು ಹೋಗಿ ಒತ್ತಾಯಿಸಿದ್ದೇವೆ. ಸರ್ಕಾರದಿಂದ ನಮಗೆ ಯಾವುದೇ ರೀತಿಯ ಉತ್ತರ ಬಂದಿಲ್ಲ. ಹೀಗಾಗಿ ಕೇಂದ್ರ ಸರ್ಕಾರದ ಸಂಪೂರ್ಣ ನಿರ್ಲಕ್ಷ್ಯತನದಿಂದಲೇ ಮಣಿಪುರದ ಘಟನೆ ಆಗಿದೆ ಎಂದರು.