ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿ ಸಿಬಿಐ ತನಿಖೆ ನಡೆಸುತ್ತಿರುವ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಅಸ್ಸಾಂ ಹೈಕೋರ್ಟ್ಗೆ ವರ್ಗಾಯಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ.
ಈ ವಿಷಯ ವ್ಯವಹರಿಸಲು ಒಬ್ಬರು ಅಥವಾ ಹೆಚ್ಚಿನ ನ್ಯಾಯಾಂಗ ಅಧಿಕಾರಿಗಳನ್ನು ನಾಮನಿರ್ದೇಶನ ಮಾಡುವಂತೆ ಗುವಾಹಾಟಿ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಕೇಳಿದೆ. ಇನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಮಣಿಪುರ ಹಿಂಸಾಚಾರದ ಅರ್ಜಿಯನ್ನು ವಿಚಾರಣೆ ನಡೆಸಿದೆ. ಜತೆಗೆ ಆರೋಪಿಗಳನ್ನು ಕೋರ್ಟ್ಗೆ ಹಾಜರುಪಡಿಸುವ ಪ್ರಕ್ರಿಯೆ, ಬಂಧನ, ನ್ಯಾಯಾಂಗ ಬಂಧನ ಮತ್ತು ಅದರ ವಿಸ್ತರಣೆಗೆ ಸಂಬಂಧಿಸಿದ ನ್ಯಾಯಾಂಗ ಕಾರ್ಯವಿಧಾನ ಗುವಾಹಾಟಿ ಹೈಕೋರ್ಟ್ ಆನ್‌ಲೈನ್ ಮೂಲಕ ನಡೆಸಲಿದೆ ಎಂದು ಹೇಳಿದೆ.
ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಅವರನ್ನು ವಿಚಾರಣೆಗೆ ಮಣಿಪುರದಿಂದ ಗೌಹಾಟಿಯ ಹೈಕೋರ್ಟ್ಗೆ ಕರೆದುಕೊಂಡ ಬರಲು ಸಾಧ್ಯವಾಗದಿದ್ದಾರೆ, ಆನ್‌ಲೈನ್ ಮೂಲಕ ಅವರನ್ನು ನ್ಯಾಯಧೀಶರ ಮುಂದೆ ಹಾಜರು ಪಡಿಸಬಹುದು ಎಂದು ಹೇಳಿದೆ. ಒಂದು ವೇಳೆ ನೆಟ್ವರ್ಕ್ ಸಮಸ್ಯೆ ಅಥವಾ ತಾಂತ್ರಿಕ ದೋಷಗಳಿಂದ ಆನ್ಲೈನ್ನಲ್ಲಿ ಹಾಜರುಪಡಿಸಲು ಸಾಧ್ಯವಾಗದಿದ್ದಾರೆ ಅಥವಾ ಅವರನ್ನು ಕೋರ್ಟ್ ಮುಂದೆ ಕರೆದುಕೊಂಡು ಬರುವುದು ಅನಿವಾರ್ಯ ಇದೆ ಎಂದು ಕಂಡು ಬಂದರೆ ಮಾತ್ರ ಅವರನ್ನು ನ್ಯಾಯಾಲಯದ ಮುಂದೆ ಕರೆದುಕೊಂಡು ಬರಲು ಅನುಮತಿ ನೀಡಲಾಗಿದೆ.
ಆಗಸ್ಟ್ 21ರಂದು, ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ಸಂತ್ರಸ್ತರ ಪರಿಹಾರ ಮತ್ತು ಪುನರ್ವಸತಿ ಮೇಲ್ವಿಚಾರಣೆಗೆ ನ್ಯಾಯಮೂರ್ತಿ ಗೀತಾ ಮಿತ್ತಲ್ ಸಮಿತಿಯನ್ನು ಸುಪ್ರೀಂ ಕೋರ್ಟ್ ನೇಮಿಸಿತ್ತು. ಇದರ ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಇಬ್ಬರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ ಸೇರಿದಂತೆ 10ಕ್ಕೂ ಹೆಚ್ಚು ಪ್ರಕರಣಗಳ ಸಿಬಿಐಗೆ ವರ್ಗಾಯಿಸಲಾಗಿದೆ.