ಮಣಿಪುರ ಹಿಂಸಾಚಾರ: ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ಅಂಗೀಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಣಿಪುರ ಹಿಂಸಾಚಾರ ಕುರಿತಂತೆ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಖಂಡನಾ ನಿರ್ಣಯವನ್ನು ಅಂಗೀಕರಿಸಲಾಗಿದೆ.

ಮಣಿಪುರದಲ್ಲಿ ನಡೆದಿರುವ ಹಿಂಸಾತ್ಮಕ ಘಟನೆಗಳು ನಾಚಿಕೆಗೇಡಿನ ಕೃತ್ಯವಾಗಿದೆ.ಅನೇಕರು ಸಾವಿಗೀಡಾಗಿದ್ದಾರೆ. ಹಲವು ಮನೆಗಳನ್ನು ಸುಟ್ಟು ಹಾಕಲಾಗಿದೆ. ಮಕ್ಕಳು ಸೇರಿದಂತೆ ಸಾರ್ವಜನಿಕರು ಆಹಾರದಿಂದ ವಂಚಿತರಾಗಿದ್ದು, ಮಹಿಳೆಯರಿಗೆ ಗೌರವವಿಲ್ಲ’ ಎಂದು ಸಂಸದೀಯ ವ್ಯವಹಾರಗಳ ಇಲಾಖೆಯ ಸಚಿವ ಸೋಭಾಂದೇಬ್ ಚಟ್ಟೋಪಾಧ್ಯಾಯ ಬೇಸರ ಹೊರಹಾಕಿದ್ದಾರೆ.

ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಸರ್ಕಾರ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ವಿರೋಧ ಪಕ್ಷಗಳ ನಾಯಕರು ಒತ್ತಾಯಿಸಿದ್ದಾರೆ. ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರ ಮತ್ತು ಮಣಿಪುರ ಸರ್ಕಾರವನ್ನು ಟೀಕಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!