Monday, September 25, 2023

Latest Posts

ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಮಣಿಪುರ ಮಹಿಳಾ ಸಂತ್ರಸ್ತರು: ಇಂದು ವಿಚಾರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಣಿಪುರದ ವೈರಲ್ ವಿಡಿಯೋ ಪ್ರಕರಣದ ಮಹಿಳಾ ಸಂತ್ರಸ್ತರು ಇತ್ತೀಚೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ, ತಮ್ಮನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಲೈಂಗಿಕ ಕಿರುಕುಳ ನೀಡಿರುವುದರ ಬಗ್ಗೆ ಅರ್ಜಿ ಸಲ್ಲಿಸಿದ್ದರು. ಮಹಿಳಾ ಸಂತ್ರಸ್ತರು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು (ಸೋಮವಾರ) ವಿಚಾರಣೆ ಕೈಗೆತ್ತಿಕೊಳ್ಳಲಿದೆ. ಈ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಕ್ರಮವನ್ನು ತೆಗೆದುಕೊಳ್ಳಬೇಕು ಹಾಗೆಯೇ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಗೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಕಳೆದ ವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ಇದೀಗ ಸಿಬಿಐ ಅಧಿಕೃತವಾಗಿ ಪ್ರಕರಣವನ್ನು ಒಪ್ಪಿಕೊಂಡಿದ್ದು, ಅದರ ವಿರುದ್ಧ ಪ್ರಕರಣ ದಾಖಲಿಸಿದೆ. ಈ ಪ್ರಕರಣದಲ್ಲಿ ಇದುವರೆಗೆ ಏಳು ಆರೋಪಿಗಳನ್ನು ಬಂಧಿಸಲಾಗಿದೆ.

ತೌಬಲ್ ಜಿಲ್ಲೆಯ ನಾಂಗ್ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ. ಜುಲೈ 20 ರಂದು ನಡೆದ ಘಟನೆಯನ್ನು ಸುಪ್ರೀಂ ಕೋರ್ಟ್‌ನ ಗಮನಕ್ಕೆ ತರಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ತಕ್ಷಣದ ಪರಿಹಾರ ಮತ್ತು ಪುನರ್ವಸತಿ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ತೆಗೆದುಕೊಂಡ ಕ್ರಮಗಳ ಬಗ್ಗೆ ಹೈಕೋರ್ಟ್‌ಗೆ ತಿಳಿಸುವಂತೆ ಕೇಂದ್ರ ಮತ್ತು ಮಣಿಪುರ ಸರ್ಕಾರಗಳಿಗೆ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಆದೇಶಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!