ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣದ ನಾಲ್ವರು ಆರೋಪಿಗಳನ್ನು 11 ದಿನಗಳ ಪೊಲೀಸ್ ಕಸ್ಟಡಿಗೆ(Police Custody) ನೀಡಲಾಗಿದೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.
ವೈರಲ್ ವಿಡಿಯೊ ಪ್ರಕರಣದಲ್ಲಿ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆ ಅಡಿಯಲ್ಲಿ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರದ ಘೋರ ಅಪರಾಧದಲ್ಲಿ ಮೂರು ಪ್ರಮುಖ ಆರೋಪಿಗಳನ್ನು ಇಂದು ಬಂಧಿಸಲಾಗಿದೆ.
ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ಒಂದು ದಿನದ ನಂತರ, ಮೇ 4 ರಂದು ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಅದೇ ವಿಡಿಯೊ ವೈರಲ್ ಆದ ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿ ಸೇರಿದಂತೆ 4 ಜನರನ್ನು ಬಂಧಿಸಿದ್ದಾರೆ.