ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (CBI) ಅಧಿಕೃತವಾಗಿ ಪ್ರಕರಣ ದಾಖಲಿಸಿಕೊಂಡಿದೆ.
ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಅಧಿಕೃತವಾಗಿ ದೂರು ದಾಖಲಿಸಿಕೊಂಡಿರುವ ಕೇಂದ್ರೀಯ ತನಿಖಾ ದಳ ತನಿಖೆ ಆರಂಭಿಸಿದೆ.
ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಧಿಸೂಚನೆ ಹೊರಡಿಸಿದ ನಂತರ ಈ ಎಫ್‌ಐಆರ್ ದಾಖಲಿಸಲಾಗಿದೆ.
CBI ಸೆಕ್ಷನ್ 153A, 398, 427, 436, 448, 302, 354, 364, 326, 376, 34 ಐಪಿಸಿ ಮತ್ತು 25 (1-C)A ಆಕ್ಟ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ. ಪ್ರಕರಣದಲ್ಲಿ 7 ಮಂದಿ ಆರೋಪಿಗಳನ್ನ ಈಗಾಗಲೇ ಬಂಧಿಸಲಾಗಿದ್ದು, ವಿಡಿಯೋ ಚಿತ್ರೀಕರಿಸಿದ ಮೊಬೈಲ್ ಫೋನ್ ಕೂಡ ವಶಪಡಿಸಿಕೊಳ್ಳಲಾಗಿದೆ.
ಸದ್ಯ ಸಿಬಿಐ ಪ್ರಕರಣದ ತನಿಖೆ ನಡೆಸಲಿದ್ದು, ಆರೋಪಿಗಳನ್ನು ಕಸ್ಟಡಿಗೆ ತೆಗೆದುಕೊಂಡು ಅವರನ್ನು ವಿಚಾರಣೆಗೆ ಒಳಪಡಿಸಲಿದೆ.