ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ ನಡೆದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣ ಸಂಬಂಧ ಪ್ರದೇಶದ ಠಾಣಾಧಿಕಾರಿ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಮಣಿಪುರ ಪೊಲೀಸರು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಮೇ 4 ರಂದು ನಡೆದ ಘಟನೆಯ ವಿಡಿಯೋ ಜುಲೈ 19 ರಂದು ವೈರಲ್ ಆದ ತಕ್ಷಣ ಮಣಿಪುರ ಪೊಲೀಸರು ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯ ಠಾಣಾಧಿಕಾರಿ ಮತ್ತು ಇತರ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲು ನಿರ್ಧರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅದೇ ರೀತಿ ಆಗಸ್ಟ್ 3 ರಂದು ಬಿಷ್ಣುಪುರದಲ್ಲಿ ಶಸ್ತ್ರಾಗಾರದ ಲೂಟಿಗೆ ಕಾರಣವಾದ ಘಟನೆಗಳನ್ನು ತನಿಖೆ ಮಾಡಲು ರಾಜ್ಯ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ನೇತೃತ್ವದಲ್ಲಿ ತನಿಖೆ ನಡೆಸಲು ಆದೇಶಿಸಿದ್ದಾರೆ ಎಂದು ಅವರು ಹೇಳಿದರು. ಬಿಷ್ಣುಪುರ್ ಜಿಲ್ಲೆಯ ನರನ್ಸೇನಾದಲ್ಲಿರುವ 2 ನೇ ಇಂಡಿಯಾ ರಿಸರ್ವ್ ಬೆಟಾಲಿಯನ್ (ಐಆರ್‌ಬಿ) ಕೇಂದ್ರ ಕಚೇರಿಯಿಂದ ಇತ್ತೀಚೆಗೆ ಶಸ್ತ್ರಾಸ್ತ್ರಗಳು ಮತ್ತು ಸುಮಾರು 19,000 ಬುಲೆಟ್‌ಗಳನ್ನು ಲೂಟಿ ಮಾಡಲಾಗಿತ್ತು.