ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರ ವಿಧಾನಸಭೆಗೆ ಎರಡನೇ ಹಾಗೂ ಕೊನೆಯ ಹಂತದ ಮತದಾನ ಪ್ರಕ್ರಿಯೆ ಇಂದು ನಡೆಯುತ್ತಿದೆ. 6 ಜಿಲ್ಲೆಗಳ, 22 ವಿಧಾನಸಭಾ ಕ್ಷೇತ್ರಗಳಲ್ಲಿ ಕಣದಲ್ಲಿರುವ ಒಟ್ಟು 92 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಬೆಳಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ತೌಬಲ್, ಚಾಂದೇಲ್, ಉಕ್ರುಲ್, ಸೇನಾಪಟಿ, ತಮೆಂಗ್ಲಾಂಗ್ ಮತ್ತು ಜಿರಿಬಾಮ್ ಜಿಲ್ಲೆಗಳಲ್ಲಿ 1242 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 8.38 ಲಕ್ಷ ಜನರು ಮತದಾನದಲ್ಲಿ ಭಾಗಿಯಾಗಿಲಿದ್ದಾರೆ.
ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, 22 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ನ 18, ನ್ಯಾಷನಲ್ ಪೀಪಲ್ ಪಾರ್ಟಿಯ 11, ಜನತಾ ದಳ(ಯುನೈಟೆಡ್) ಮತ್ತು ನಾಗಾ ಪೀಪಲ್ಸ್ ಫ್ರಂಟ್ನ 10, ಶಿವಸೇನೆ, ಎನ್‌ಸಿಪಿ, ಸಿಪಿಐ ಮತ್ತು 12 ಸ್ವಾತಂತ್ರ್ಯ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಣಿಪುರದಲ್ಲಿ ಮೊದಲ ಹಂತದ ಚುನಾವಣೆ ಫೆ 28 ರಂದು ನಡೆದಿತ್ತು.