ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕಾಯ್ದಿರಿಸಿದೆ.
ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಪರವಾಗಿ ವಕೀಲ ಅಭಿಷೇಕ್ ಸಿಂಘ್ವಿ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ಅವರ ವಾದವನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್.ವಿ.ಎನ್ ಭಟ್ಟಿ ಅವರಿದ್ದ ವಿಭಾಗೀಯ ಪೀಠವು, ಸಿಸೋಡಿಯಾ ಅವರ ಎರಡು ಪ್ರತ್ಯೇಕ ಜಾಮೀನು ಅರ್ಜಿಗಳ ತೀರ್ಪನ್ನು ಕಾಯ್ದಿರಿಸಿದೆ.
ಸಿಸೋಡಿಯಾ ಅವರನ್ನು ಫೆಬ್ರುವರಿ 26ರಂದು ಸಿಬಿಐ ಬಂಧಿಸಿತ್ತು. ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಿದ ನಂತರ ಮಾರ್ಚ್ 9ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅವರನ್ನು ಬಂಧಿಸಿತ್ತು. ಫೆಬ್ರವರಿ 28ರಂದು ಸಿಸೋಡಿಯಾ ದೆಹಲಿ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು.