ಹೊಸದಿಗಂತ ಡಿಜಿಟಲ್ ಡೆಸ್ಕ್ :
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಫೆಬ್ರವರಿ 26 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿತ್ತು. ಇಂದಿಗೆ ಅವರ ಸಿಬಿಐ ಕಸ್ಟಡಿ ಅವಧಿ ಮುಕ್ತಾಯವಾಗಿದ್ದು, ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ತಿಳಿದುಬಂದಿದೆ.
ಕೇಂದ್ರ ತನಿಖಾ ಸಂಸ್ಥೆಯು ಎಎಪಿ ನಾಯಕನನ್ನು ಹೆಚ್ಚಿನ ಕಸ್ಟಡಿಗೆ ಪಡೆಯುವ ಸಾಧ್ಯತೆಯಿಲ್ಲ. ಸಿಸೋಡಿಯಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಸಿಬಿಐ ನ್ಯಾಯಾಲಯವನ್ನು ಕೋರುವ ಸಾಧ್ಯತೆ ಇದೆ.