ಕೊಪ್ಪಳ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಮಂಜುಳಾ ಅಮರೇಶ್ ಕರಡಿ?

ಹೊಸದಿಗಂತ ವರದಿ ಕೊಪ್ಪಳ :

ಮಹಿಳೆಯರು ರಾಜಕೀಯಕ್ಕೆ ಬರಬೇಕು ಎಂಬ ಸದುದ್ದೇಶದಿಂದ ಬಿಜೆಪಿ ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ. ಮಂಜುಳಾ ಅಮರೇಶ ಕರಡಿ ಹೆಸರು ಅಂತಿಮವಾಗಿದ್ದು, ಘೋಷಣೆಯೊಂದೇ ಬಾಕಿಯಿದೆ.

ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಪಕ್ಷದಿಂದ ಮಹಿಳೆ ಕಣಕ್ಕಿಳಿಯುತ್ತಿದ್ದಾರೆ. ಈಗಾಗಲೇ ಬಿಜೆಪಿ ಹೈ ಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಮಂಗಳವಾರ ದೊಳಗೆ ಪಟ್ಟಿ ಬಿಡುಗಡೆಯಾಗಲಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಮಹಿಳೆಯರಿಗೆ ಸ್ಥಳೀಯ ಮಟ್ಟದ ಸಮಸ್ಯೆ ತಿಳಿದಿದ್ದು, ಇಂತವರು ವಿಧಾನಸಭೆಗೆ ಬಂದರೆ ಸಮಸ್ಯೆಗೆ ಪರಿಹಾರ ಸಿಗಲಿದೆ ಹಾಗೂ ಮಹಿಳೆಯರ ಸಬಲೀಕರಣಕ್ಕಾಗಿ ಬಿಜೆಪಿ ಈ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!