Friday, June 2, 2023

Latest Posts

ಮಹದೇವಪುರದಲ್ಲಿ ಮಂಜುಳಾ ಲಿಂಬಾವಳಿ ಪರ ತ್ರಿಪುರ ಮಾಜಿ ಸಿಎಂ ಬಿಪ್ಲಾವ್ ಕುಮಾರ್ ದೇಬ್ ಪ್ರಚಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್ :

ತ್ರಿಪುರದ ಮಾಜಿ ಮುಖ್ಯಮಂತ್ರಿ ಬಿಪ್ಲಾವ್ ಕುಮಾರ್ ದೇಬ್ ಮಹದೇವಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ಅವರ ಪರವಾಗಿ ಕ್ಷೇತ್ರದ ಯಮಲೂರಿನಲ್ಲಿ ಪ್ರಚಾರ ನಡೆಸಿದರು. ದೊಡ್ಡನೆಕ್ಕುಂದಿ,ಯಮಲೂರು ಸೇರಿದಂತೆ ವಿವಿಧೆಡೆ ಮಂಜುಳಾ ಅರವಿಂದ ಲಿಂಬಾವಳಿ ಪರ ಪ್ರಚಾರ ಮಾಡಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಚಾರದಲ್ಲಿ ಮಾತನಾಡಿದ ಬಿಪ್ಲಾವ್ ಕುಮಾರ್ ದೇಬ್ , ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ.ಡಬಲ್ ಇಂಜಿನ್ ಸರ್ಕಾರದಿಂದ ಹಲವು ಅಭಿವೃದ್ಧಿ ಕಾರ್ಯಗಳಾಗಿದ್ದು‌ ಮತ್ತಷ್ಟು ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಬಿಜೆಪಿ ಪಕ್ಷವನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಮೂರುಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಅರವಿಂದ ಲಿಂಬಾವಳಿ ಅವರ ಅಭಿವೃದ್ಧಿ ಕಾರ್ಯಗಳು ಮುಂದುವರೆಸುವ ನಿಟ್ಟಿನಲ್ಲಿ ಪತ್ನಿಗೆ ಈ ಬಾರಿ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!