ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಪ್ರಧಾನ ಅರ್ಚಕ ಮಂಜುನಾಥ ಅಡಿಗ (೬೪) ಹೃದಯಾಘಾತದಿಂದ ಸ್ವಗೃಹದಲ್ಲಿ ಬುಧವಾರ ನಿಧನರಾದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಸುಮಾರು ೧೮ ವರ್ಷಗಳ ಕಾಲ ಪ್ರಧಾನ ಅರ್ಚಕರಾಗಿ ಹಾಗೂ ಪ್ರಧಾನ ತಂತ್ರಿಯಾಗಿ ಸೇವೆ ಸಲ್ಲಿಸಿದ್ದ ಇವರು ೨೦೧೪ರಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕೆಯ ಸೇವೆಯನ್ನು ಪುತ್ರ ನಿತ್ಯಾನಂದ ಅಡಿಗ ಅವರಿಗೆ ಹಸ್ತಾಂತರ ಮಾಡಿದ್ದರು.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಇವರು ಸ್ನಾನಗೃಹದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.