ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರ ಗುಂಡಿಗೆ ಬಲಿಯಾದ ಉದ್ಯಮಿ ಮಂಜುನಾಥ್ ರಾವ್ ಅವರ ಮೃತದೇಹ ಶಿವಮೊಗ್ಗಕ್ಕೆ ತಲುಪಿದೆ.
ಉಗ್ರರಿಂದ ಮಂಜುನಾಥ್ ಜೀವ ಹೋಗಿದ್ದು, ಇಡೀ ಶಿವಮೊಗ್ಗ ಮೌನಕ್ಕೆ ಜಾರಿಗೆ. ಉಗ್ರರನ್ನು ಸದೆಬಡಿಯಲೇಬೇಕು ಎಂದು ಕಣ್ಣೀರಿಟ್ಟಿದೆ.
ಬೆಂಗಳೂರಿನಿಂದ ತುಮಕೂರು, ಚಿತ್ರದುರ್ಗ ಮಾರ್ಗವಾಗಿ ಆಂಬುಲೆನ್ಸ್ ಮೂಲಕ ಮಂಜುನಾಥ್ ಪಾರ್ಥಿವ ಶರೀರ ಶಿವಮೊಗ್ಗಕ್ಕೆ ಸಾಗಿಸಲಾಯಿತು. ಈ ವೇಳೆ ತುಮಕೂರಿನ ಕ್ಯಾತಸಂದ್ರದ ಟೋಲ್ ಗೇಟ್‍ನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ನಗರ ಶಾಸಕ ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ ಸೇರಿದಂತೆ ಹಲವರು ಅಂತಿಮ ದರುಶನ ಪಡೆದರು.