ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸರ್ಕಾರ ರಜೆ ಘೋಷಣೆ ಮಾಡಿದೆ.
ಶಾಲಾ ಕಾಲೇಜುಗಳು, ಬ್ಯಾಂಕ್ ಹಾಗೂ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸುವುದಿಲ್ಲ. ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. .
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ಅವರನ್ನು ಇಂದು ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲು ಮಾಡಲಾಗಿತ್ತು. ರಾತ್ರಿಯ ವೇಳೆಗೆ ಅವರು ಚಿಕಿತ್ಸೆಗೆ ಸ್ಪಂದಿಸದೆ ವಿಧಿವಶರಾಗಿದ್ದಾರೆ. ರಾತ್ರಿ 8.06 ನಿಮಿಷಕ್ಕೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ರಾತ್ರಿ 9.51ಕ್ಕೆ ಅವರು ಅಸುನೀಗಿದ್ದಾರೆ ಎಂದು ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರು ಬುಲೆಟಿನ್‌ನಲ್ಲಿ ತಿಳಿಸಿದ್ದಾರೆ.