ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಜಾಗ ಕೋರಿ, ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನಿಗಳಿಗೆ ಪತ್ರ ಬರೆದಿದೆ. ಅವರ ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲೇ ಸ್ಮಾರಕ ನಿರ್ಮಾಣ ಮಾಡುವ ಸಾಧ್ಯತೆಗಳ ಕುರಿತು ಪರಿಶೀಲಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ್ದಾರೆ
ಎರಡು ಅವಧಿಗೆ ದೇಶದ ಪ್ರಧಾನಿಯಾಗಿದ್ದ ಸಿಂಗ್ ಅವರ ಸ್ಮಾರಕ ಸ್ಥಾಪಿಸುವ ಕುರಿತು ಮೋದಿ ಮಾತನಾಡಿದ ಬಳಿಕ ಅವರಿಗೆ ಪತ್ರ ಬರೆದಿರುವ ಖರ್ಗೆ, ನಾಳೆ ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ ನಡೆಯಲಿರುವ ಸ್ಥಳ ದೇಶದ ಹೆಮ್ಮೆಯ ಪುತ್ರನ ಸ್ಮಾರಕದ ಪವಿತ್ರ ಸ್ಥಳವಾಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇಂದು ಬೆಳಗ್ಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ.
ರಾಷ್ಟ್ರನಾಯಕರು ಮತ್ತು ಮಾಜಿ ಪ್ರಧಾನಿಗಳ ಅಂತ್ಯಕ್ರಿಯೆಯ ಸ್ಥಳದಲ್ಲಿಯೇ ಸ್ಮಾರಕ ನಿರ್ಮಿಸುವ ಸಂಪ್ರದಾಯವಿದೆ. ಅದರಂತೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿಯೇ ಮನಮೋಹನ್ ಸಿಂಗ್ ಅಂತ್ಯ ಸಂಸ್ಕಾರ ನಡೆಯಬೇಕು ಎಂದು ಖರ್ಗೆ ಮನವಿ ಮಾಡಿದ್ದಾರೆ.
ಜಾಗತಿಕ ಆರ್ಥಿಕ ಆರ್ಥಿಕ ಬಿಕ್ಕಟ್ಟನ್ನು ತಗ್ಗಿಸುವಲ್ಲಿ ಸಿಂಗ್ ಅವರ ಸಲಹೆ, ನಾಯಕತ್ವ ಮತ್ತು ಕೊಡುಗೆ ಪ್ರಮುಖವಾದದ್ದು, ರಾಷ್ಟ್ರ ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿದ್ದಾಗ, ಮಾಜಿ ಪ್ರಧಾನಿ ಪಿ ವಿ ನರಸಿಂಹರಾವ್ ಅವರೊಂದಿಗೆ ಡಾ. ಮನಮೋಹನ್ ಸಿಂಗ್ ಅವರು ದೇಶವನ್ನು ಬಿಕ್ಕಟ್ಟಿನಿಂದ ಹೊರತೆಗೆದು ಆರ್ಥಿಕ ಸಮೃದ್ಧಿ ಮತ್ತು ಸ್ಥಿರತೆಯತ್ತ ಕೊಂಡೊಯ್ದಿದ್ದರು ಎಂದು ಪತ್ರದಲ್ಲಿ ಖರ್ಗೆ ತಿಳಿಸಿದ್ದಾರೆ.