ಮನಮೋಹನ್ ಸಿಂಗ್ ಭಾರತ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯ!

ಹೊಸದಿಗಂತ ಡಿಜಿಟಲ್ ಡೆಸ್ಕ್

ಮಾಜಿ ಪ್ರಧಾನಿ ದಿವಂಗತ ಮನಮೋಹನ್ ಸಿಂಗ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎನ್ನುವ ಒತ್ತಡ ಹೆಚ್ಚುತ್ತಿದೆ. ಭಾರತ ರತ್ನ ನೀಡುವಂತೆ ಒತ್ತಾಯಿಸಿ ತೆಲಂಗಾಣ ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿ ಕೇಂದ್ರಕ್ಕೆ ಒತ್ತಡ ಹಾಕಿದ ಬೆನ್ನಲ್ಲೇ ಚರ್ಚೆ ಶುರುವಾಗಿದೆ.

ಮನಮೋಹನ್ ಸಿಂಗ್ ಅವರು ನಮ್ಮ ದೇಶದ ಮಹಾನ್ ನಾಯಕರಾಗಿದ್ದು, ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು. ಕೇಂದ್ರ ಸರ್ಕಾರ ತೆಲಂಗಾಣ ವಿಧಾನಸಭೆ ನಿರ್ಣಯವನ್ನು ಅಂಗೀಕರಿಸುವಂತೆ ನಾನು ಕೇಂದ್ರವನ್ನು ಒತ್ತಾಯಿಸುತ್ತೇನೆ ಎಂದು ರಾಜ್ಯಸಭೆಯ ಕಾಂಗ್ರೆಸ್ ಉಪನಾಯಕ ಪ್ರಮೋದ್ ತಿವಾರಿ ಒತ್ತಾಯಿಸಿದ್ದಾರೆ.

ಶಿಕ್ಷಣದ ಹಕ್ಕು, ಮಾಹಿತಿ ಹಕ್ಕು, ನರೇಗಾ ಮುಂತಾದ ಕಾರಣಗಳಿಗಾಗಿ ಮನಮೋಹನ್ ಸಿಂಗ್‌ಗೆ ಭಾರತ ರತ್ನ ನೀಡಬೇಕೆಂದು ತೆಲಂಗಾಣ ವಿಧಾನಸಭೆ ಒತ್ತಾಯಿಸಿದ್ದು ಸರಿಯಾಗಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಶುಭರಂಶ್ ಕುಮಾರ್ ರೈ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!