ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಗುರುವಾರ ರಾತ್ರಿ ನಿಧನರಾಗಿದ್ದು, ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದು, ಇಂದು ಅಧಿಕೃತ ಮಾಹಿತಿ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ಮನಮೋಹನ್ ಸಿಂಗ್ ಅವರ ನಿಧನದ ನಂತರ, ಡಿಸೆಂಬರ್ 28 ರಂದು ನಡೆಯಬೇಕಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನ ಸೇರಿದಂತೆ ಎಲ್ಲಾ ಕಾಂಗ್ರೆಸ್ ಕಾರ್ಯಕ್ರಮಗಳನ್ನು ಏಳು ದಿನಗಳ ಕಾಲ ರದ್ದುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.