ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರವನ್ನು ನವದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ಇಂದು ಬೆಳಿಗ್ಗೆ 11.45 ಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು.
“ಡಾ. ಮನಮೋಹನ್ ಸಿಂಗ್ ಅವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು ಎಂದು ಸರ್ಕಾರ ನಿರ್ಧರಿಸಿದೆ. ಅಂತ್ಯಕ್ರಿಯೆಯು ಡಿಸೆಂಬರ್ 28, 2024 ರಂದು ಬೆಳಿಗ್ಗೆ 11:45 ಕ್ಕೆ ನವದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ನಡೆಯಲಿದೆ” ಎಂದು ಗೃಹ ವ್ಯವಹಾರಗಳ ಸಚಿವಾಲಯ ಸಂವಹನದಲ್ಲಿ ಹೇಳಿದ್ದರು.