ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪತ್ನಿ ಗುರುಶರಣ್ ಕೌರ್ ಮತ್ತು ಅವರ ಪುತ್ರಿ ದಮನ್ ಸಿಂಗ್ ಅವರು ಈ ಇಂದು ರಾಷ್ಟ್ರ ರಾಜಧಾನಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಧಾನ ಕಚೇರಿಯಲ್ಲಿ ಅವರಿಗೆ ಅಂತಿಮ ನಮನ ಸಲ್ಲಿಸಿದರು.
ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ವಯನಾಡು ಲೋಕಸಭಾ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ರಾಜಕಾರಣಿಗಳು ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.
ಡಾ. ಮನಮೋಹನ್ ಸಿಂಗ್ ಅವರ ಗೌರವಾರ್ಥ ದೆಹಲಿಯ ಕಾಶ್ಮೀರ್ ಗೇಟ್‌ನಲ್ಲಿರುವ ನಿಗಮ್ ಬೋಧ್ ಘಾಟ್‌ನಲ್ಲಿ ಅಂತ್ಯಕ್ರಿಯೆಯ ಮೆರವಣಿಗೆಗೆ ಸಿದ್ಧತೆಗಳು ನಡೆಯುತ್ತಿವೆ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ನೆರವೇರಲಿದೆ.
ದೆಹಲಿಯಲ್ಲಿರುವ ಮಾಜಿ ಪ್ರಧಾನಿ ಅವರ ನಿವಾಸದ ಹೊರಗೆ ಅಂತಿಮ ನಮನ ಸಲ್ಲಿಸಲು ಹಲವಾರು ಜನರು ಜಮಾಯಿಸಿದ್ದಾರೆ.