ಮನ್ ಕಿ ಬಾತ್| ಒಮ್ಮೆಯಾದರೂ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಮಹಾತ್ಮಾ ಗಾಂಧಿ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಹಾತ್ಮ ಗಾಂಧಿಯನ್ನು ಸ್ಮರಿಸಿ, ಗೌರವ ಸಲ್ಲಿಸಿದರು. ಇಂದು ಈ ವರ್ಷದ ಮೊದಲ ಮನ್ ಕಿ ಬಾತ್ ಮೂಲಕ ಜನರನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದು, ಪ್ರತೀ ನಾಗರಿಕನೂ ಒಂದಲ್ಲಾ ಒಂದು ಬಾರಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಬೇಕು ಎಂದು ಹೇಳಿದರು.

ಯುದ್ಧ ಸ್ಮಾರಕಕ್ಕೆ ಭೇಟಿ ನೀಡುವುದರಿಂದ ವಿಶೇಷ ಶಕ್ತಿ ಮತ್ತು ಸ್ಫೂರ್ತಿ ಮೂಡುತ್ತದೆ ಎಂದಿದ್ದಾರೆ. ಭಾರತೀಯ ಸಶಸ್ತ್ರ ಪಡೆಗಳಲ್ಲಿರುವ ಕೆಲವು ಯೋಧರು ನನಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಅಮರ್ ಜವಾನ್ ಜ್ಯೋತಿಯ ಮಹತ್ವ ವಿವರಿಸಲಾಗಿದೆ. ಈ ಪತ್ರಗಳ ಮೂಲಕ ಹುತಾತ್ಮರ ತ್ಯಾಗ ಅವರ ಕುಟುಂಬದ ಬಗ್ಗೆ ಇನ್ನಷ್ಟು ತಿಳಿದೆ ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃರಿಗೆ ಪ್ರಧಾನಿ ಮೋದಿ ಅಭಿನಂದನೆ ತಿಳಿಸಿದ್ದಾರೆ. ಈಗಾಗಲೇ ಬಾಲ ಪುಸ್ಕಾರ. ಪದ್ಮ ಪುರಸ್ಕಾರ ಘೋಷಿಸಲಾಗಿದೆ. ಪ್ರಶಸ್ತಿ ಪುರಸ್ಕೃತರ ಜೀವನ ಉಳಿದವರಿಗೂ ಮಾದರಿಯಾಗಬೇಕು ಎಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!