ಗೋವಾ ವಿಮಾನ ನಿಲ್ದಾಣಕ್ಕೆ ಮನೋಹರ್ ಪರಿಕ್ಕರ್ ಹೆಸರು: ಕೇಂದ್ರ ಸರಕಾರ ಸಮ್ಮತಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಗೋವಾದ ಗ್ರೀನ್‌ ಫೀಲ್ಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಾಜಿ ರಕ್ಷಣಾ ಸಚಿವ ಮತ್ತು ನಾಲ್ಕು ಬಾರಿ ಗೋವಾ ಸಿಎಂ ಆಗಿದ್ದ ದಿ. ಮನೋಹರ್ ಪರಿಕ್ಕರ್ ಅವರ ಹೆಸರಿಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಗೋವಾ ರಾಜ್ಯದ ಜನತೆಯ ಆಕಾಂಕ್ಷೆಯ ಅನ್ವಯ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆ ಮೋಪಾ ವಿಮಾನ ನಿಲ್ದಾಣಕ್ಕೆ ಮನೋಹರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಸಲು ಸರ್ವಾನುಮತದ ನಿರ್ಧಾರ ಕೈಗೊಂಡು, ತೀರ್ಮಾವನ್ನು ಕೇಂದ್ರಕ್ಕೆ ತಿಳಿಸಿದ್ದರು.

ಇಂದು ಸಚಿವ ಸಂಪುಟ ಸಭೆಯಲ್ಲಿ ದಿ. ಮನೋಹರ್ ಪರಿಕ್ಕರ್ ಅವರಿಗೆ ಗೌರವ ಸೂಚಕವಾಗಿ ಗೋವಾದ ಗ್ರೀನ್‌ ಫೀಲ್ಡ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ‘ಮನೋಹರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಹೆಸರಿಡಲು ಸಮ್ಮತಿ ಸಿಕ್ಕಿದೆ.

ಗೋವಾದ ಮೊಪಾದಲ್ಲಿರುವ ಗ್ರೀನ್‌ ಫೀಲ್ಡ್ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 2022 ರಲ್ಲಿ ಉದ್ಘಾಟಿಸಿದರು. ಆಧುನಿಕ ಗೋವಾವನ್ನು ನಿರ್ಮಿಸಲು ಮನೋಹರ್ ಪರಿಕ್ಕರ್ ಅವರ ಕೊಡುಗೆಯನ್ನು ಗುರುತಿಸಿ ವಿಮಾನ ನಿಲ್ದಾಣಕ್ಕೆ ಅವರ ಹೆಸರನ್ನು ಇಡಲಾಗಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!