Wednesday, September 28, 2022

Latest Posts

ಕೋಸ್ಟ್ ಗಾರ್ಡ್ ನ ಪಶ್ಚಿಮ ವಲಯದ ನೂತನ ಕಮಾಂಡರ್ ಆಗಿ ಮನೋಜ್ ವಸಂತ ಬಾಡ್ಕರ್ ಆಯ್ಕೆ

ಹೊಸದಿಗಂತ ವರದಿ,ಅಂಕೋಲಾ:

ಭಾರತೀಯ ಕೋಸ್ಟ್ ಗಾರ್ಡ್ ನ ಪಶ್ಚಿಮ ವಲಯದ ನೂತನ ಕಮಾಂಡರ್ ಆಗಿ ಕಾರವಾರದ ಮನೋಜ್ ವಸಂತ ಬಾಡ್ಕರ್ ಅವರು ಆಯ್ಕೆಯಾಗಿದ್ದಾರೆ.ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ಮನೋಜ್ ಅವರು ಕಮಾಂಡರ್ ಆಗಿ ಅಧಿಕಾರ ಸ್ವೀಕರಿಸಿದರು.
ಕಾರವಾರದ ಸೆಂಟ್ ಜೋಸೆಫ್ ಶಾಲೆ ಮತ್ತು ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪೂರೈಸಿರುವ ಮನೋಜ್ ಅವರು ತಮ್ಮ 36 ವರ್ಷಗಳ ಸೇವಾ ಅವಧಿಯಲ್ಲಿ ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದು 2006 ರಿಂದ 2008 ಭಾರತೀಯ ಕೋಸ್ಟ್ ಗಾರ್ಡ್ ನ ಕರ್ನಾಟಕ ರಾಜ್ಯದ
ಮುಖ್ಯಸ್ಥರಾಗಿ 2013 ರಿಂದ 2018 ರ ವರೆಗೆ ಕೋಸ್ಟ್ ಗಾರ್ಡ್ ಗೋವಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ 2018 ರಲ್ಲಿ ಐ.ಜಿ ಯಾಗಿ ಪದೋನ್ನತಿ ಹೊಂದಿದ್ದರು.
ಇದೀಗ ಭಾರತೀಯ ಕೋಸ್ಟ್ ಗಾರ್ಡ್ ಕಮಾಂಡರ್ ಆಗಿ ನೇಮಕ ಆಗಿರುವ ಮನೋಜ್ ಅವರು ಪಶ್ಚಿಮ ವಲಯದ ಕರ್ನಾಟಕ, ಮಹಾರಾಷ್ಟ್ರ,ಗೋವಾ, ಕೇರಳ ಮತ್ತು ಲಕ್ಷದ್ವೀಪಗಳ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ಕಾರವಾರದ ಮನೋಜ್ ವಸಂತ ಬಾಡ್ಕರ್ ಅವರು ಕೋಸ್ಟ್ ಗಾರ್ಡ್ ನ ಕಮಾಂಡರ್ ಆಗಿ ನೇಮಕಗೊಂಡಿರುವುದಕ್ಕೆ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಾರವಾರದ ಸುಪುತ್ರ ಅತ್ಯುನ್ನತ ಸ್ಥಾನಕ್ಕೆ ಪದೋನ್ನತಿ ಹೊಂದಿರುವುದು ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದ್ದು ಕ್ಷೇತ್ರದ ಜನತೆ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!