ಮಲಯಾಳಂನಲ್ಲಿ 8 ನಿರ್ದೇಶಕರಿಂದ ‘ಮನೋರಥಂಗಳ್‌’ ಸೀರಿಸ್: ಸ್ಟಾರ್‌ಗಳ ಸಮಾಗಮ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮಲಯಾಳಂ ಸಿನಿಮಾ ಅಂದಾಗ ಒಂದಿಲ್ಲೊಂದು ಪ್ರಯೋಗಳನ್ನು ಮಾಡುವ ಮೂಲಕ ಜನರಿಗೆ ಬೇಗನೆ ಇಷ್ಟವಾಗುತ್ತೆ. ಈಗ ‘ಮನೋರಥಂಗಳ್‌’ ವೆಬ್​​ ಸರಣಿಯಲ್ಲೂ ಅಂಥದ್ದೊಂದು ಪ್ರಯೋಗ ನಡೆದಿದೆ.

ಕಥಾಸಂಕಲನದ ಸೀರಿಸ್​ ಆಗಿದ್ದು, 9 ಕಥೆಗಳು ಇವೆ. ಇವುಗಳಿಗೆ 8 ಮಂದಿ ನಿರ್ದೇಶನ ಮಾಡಿದ್ದಾರೆ. ಮಲಯಾಳಂ ಚಿತ್ರರಂಗದ ಜನಪ್ರಿಯ ನಟ-ನಟಿಯರು ಈ ವೆಬ್​ ಸಿರೀಸ್​ನಲ್ಲಿ ಅಭಿನಯಿಸಿದ್ದಾರೆ. ಮೋಹನ್​ಲಾಲ್​, ಫಹಾದ್​ ಫಾಸಿಲ್, ಮಮ್ಮುಟ್ಟಿ ಅವರಂತಹ ಖ್ಯಾತ ಕಲಾವಿದರು ಇದರಲ್ಲಿ ಇದ್ದಾರೆ.

ಮಲಯಾಳಂನ ಅಚ್ಚುಮೆಚ್ಚಿನ ಬರಹಗಾರ, ಚಿತ್ರಕಥೆಗಾರ ಮತ್ತು ನಿರ್ದೇಶಕ ಎಂ.ಟಿ.ವಾಸುದೇವನ್ ನಾಯರ್ ಈ ಸೀರಿಸ್‌ಗೆ ಕಥೆ ಬರೆದಿದ್ದು, ಅವರ ಹುಟ್ಟುಹಬ್ಬದ ಪ್ರಯುಕ್ತ ಮನೋರಥಂಗಳ್‌ ಟ್ರೈಲರ್‌ ಬಿಡುಗಡೆಯಾಗಿದೆ.

9 ಕಥೆಗಳಿರುವ ಈ ಆಂಥಾಲಜಿಗೆ 8 ಮಂದಿ ನಿರ್ದೇಶಕರು ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ʼಮನೋರಥಂಗಳ್‌ʼ ಆಂಥಾಲಜಿ ಆಗಸ್ಟ್‌ 15ರಂದು ಜೀ5ನಲ್ಲಿ ಬಿಡುಗಡೆ ಆಗಲಿದೆ.

ಕಮಲ್ ಹಾಸನ್, ಮೋಹನ್ ಲಾಲ್, ಮಮ್ಮುಟ್ಟಿ, ಫಹಾದ್ ಫಾಸಿಲ್, ಪಾರ್ವತಿ ತಿರುವೋತ್ತು, ಹರೀಶ್ ಉತ್ತಮನ್, ಬಿಜು ಮೆನನ್, ಶಾಂತಿ ಕೃಷ್ಣ, ಜಾಯ್ ಮ್ಯಾಥ್ಯೂ, ಮಧು, ಆಸಿಫ್ ಅಲಿ, ನದಿಯಾ ಮೊಯ್ದು, ಕೈಲಾಸ, ಇಂದ್ರನ್ಸ್, ನೆಡುಮುಡಿ ವೇಣು, ರಣಜಿ ಪಣಿಕ್ಕರ್, ಸುರಭಿ ಲಕ್ಷ್ಮೀ, ಸಿದ್ದಿಕ್, ಇಶಿತ್ ಯಾಮಿನಿ, ನಾಸೀರ್, ಇಂದ್ರಜಿತ್, ಅಪರ್ಣಾ ಬಾಲಮುರಳಿ ಮತ್ತಿತರರು ನಟಿಸಿದ್ದಾರೆ.

ಜೀ5 ನಿರ್ಮಾಣ ಮಾಡಿರುವ ಈ ಆಂಥಾಲಜಿ ಆಗಸ್ಟ್‌ 15ರಂದು ಪ್ರೀಮಿಯರ್ ಆಗಲಿದೆ. ಮಲಯಾಳಂ ಜತೆಗೆ ತೆಲುಗು, ತಮಿಳು, ಕನ್ನಡ ಮತ್ತು ಹಿಂದಿಯಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯ.

9 ಕಥೆಗಳಿಗೆ 8 ನಿರ್ದೇಶಕರು
ಮೋಹನ್‌ಲಾಲ್ ನಟಿಸಿರುವ ಪ್ರಿಯದರ್ಶನ್ ನಿರ್ದೇಶಿಸಿದ ‘ಒಲ್ಲವುಮ್ ತೀರವುಮ್’ ಬ್ಲ್ಯಾಕ್‌ & ವೈಟ್‌ನಲ್ಲಿ ಮೂಡಿಬಂದಿದೆ. ರಂಜಿತ್ ಅವರ ನಿರ್ದೇಶನದಲ್ಲಿ ‘ಕಾಡುಗನ್ನವ ಒರು ಯಾತ್ರೆ ಕುರಿಪ್ಪು’ ಕಥೆಯಲ್ಲಿ ಮಮ್ಮುಟ್ಟಿ ನಟಿಸಿದ್ದಾರೆ.

‘ಶಿಲಾಲಿಖಿತಂ’ ಪ್ರಿಯದರ್ಶನ್ ನಿರ್ದೇಶನದ ಈ ಕಥೆಯಲ್ಲಿ ಬಿಜು ಮೆನನ್, ಶಾಂತಿಕೃಷ್ಣ ಮತ್ತು ಜಾಯ್ ಮ್ಯಾಥ್ಯೂ ಅಭಿನಯಿಸಿದ್ದಾರೆ. ಶ್ಯಾಮಪ್ರಸಾದ್ ನಿರ್ದೇಶನದ ‘ಕಜ್ಚಾ’ದಲ್ಲಿ ಪಾರ್ವತಿ ತಿರುವೋತ್ತು ಮತ್ತು ಹರೀಶ್ ಉತ್ತಮನ್ ಕಾಣಿಸಿಕೊಂಡಿದ್ದಾರೆ.

ಮಾಧೂ ಮತ್ತು ಆಸಿಫ್ ಅಲಿ ನಟಿಸಿರುವ ‘ವಿಲ್ಪನಾ’ಕ್ಕೆ ಅಶ್ವತಿ ನಾಯರ್ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಅಭಿನವ ಮಹೇಶ್ ನಾರಾಯಣನ್ ನಿರ್ದೇಶನದ ‘ಶರ್ಲಾಕ್’ನಲ್ಲಿ ಫಹಾದ್ ಫಾಸಿಲ್ ಮತ್ತು ಜರೀನಾ ಮೊಯ್ದು ಜೋಡಿ ಕಾಣಿಸಿಕೊಂಡಿದೆ. ‘ಸ್ವರ್ಗಂ ತುರಕ್ಕುನ್ನ ಸಮಯ’ ಜಯರಾಜನ್ ನಾಯರ್ ನಿರ್ದೇಶನದ ಚಿತ್ರವಾಗಿದ್ದು, ಕೈಲಾಶ್, ಇಂದ್ರನ್ಸ್, ನೆಡುಮುಡಿ ವೇಣು, ಎಂಜಿ ಪಣಿಕ್ಕರ್ ಮತ್ತು ಸುರಭಿ ಲಕ್ಷ್ಮೀ ನಟಿಸಿದ್ದಾರೆ.

‘ಅಭ್ಯಾಮ್ ತೀಡಿ ವೀಂದುಂ’ ಸಿದ್ಧಿಕ್, ಇಶಿತ್ ಯಾಮಿನಿ ಮತ್ತು ನಜೀರ್ ಅಭಿನಯಿಸಿರುವ ಚಿತ್ರವಾಗಿದ್ದು, ಸಂತೋಷ್ ಶಿವನ್ ನಿರ್ದೇಶಿಸಿದ್ದಾರೆ. ‘ಕಡಲ್‌ಕಾಟ್ಟು’ ರತೀಶ್ ಅಂಬಾಟ್ ನಿರ್ದೇಶನದ ಈ ಸಿನಿಮಾದಲ್ಲಿ ಇಂದ್ರಜಿತ್ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತೆ ಅಪರ್ಣಾ ಬಾಲಮುರಳಿ ನಟಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!