October 7, 2026
Wednesday, October 7, 2026
spot_img

ನಿಟ್ಟೂರು ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ: ಪೊಲೀಸರಿಂದ ತನಿಖೆ

ಹೊಸದಿಗಂತ ವರದಿ ತುಮಕೂರು:

ಗುಬ್ಬಿ ಮೂಲಕ ತಿಪಟೂರು ಕಡೆಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಬರುವ ನಿಟ್ಟೂರುಈ ಬಸ್ ನಿಲ್ದಾಣದಲ್ಲಿ ಸೋಮವಾರ ಮುಂಜಾನೆ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ.

ನಿಟ್ಟೂರು ಬಸ್ ನಿಲ್ದಾಣದಲ್ಲಿ ಶವವಾಗಿ ಪತ್ತೆಯಾಗಿರುವ ವ್ಯಕ್ತಿಯನ್ನು ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಶಿವಸಂದ್ರ ಗ್ರಾಮದ ಸುಮಾರು 70 ವರ್ಷದ ಕಲ್ಲೇಶಯ್ಯ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:

ಮದ್ಯ ವ್ಯಸನಿಯಾಗಿದ್ದ ಕಲ್ಲೇಶಯ್ಯ ನಿತ್ಯ ನಿಟ್ಟೂರು ಬಸ್ ನಿಲ್ದಾಣ ಸೇರಿದಂತೆ ಹಲವು ಕಡೆಗಳಲ್ಲಿ ಸಂಚಾರ ಮಾಡುತ್ತಿದ್ದು ಅಲ್ಲಿಯೇ ತಂಗುತ್ತಿದ್ದ ಎನ್ನಲಾಗಿದ್ದು ಈತನ ಕುಟುಂಬದವರು ಬೆಂಗಳೂರಿನಲ್ಲಿ ವಾಸವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು ಇನ್ನೂ ಈತನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ವಿಷಯ ತಿಳಿದ ಕೂಡಲೇ ಗುಬ್ಬಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಶವವನ್ನು ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದ್ದು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.

Must Read