ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸಕೋಟೆ ತಾಲೂಕಿನ ಮೈಲಾಪುರ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಹಿಳೆ ನಾಪತ್ತೆ ವಿಚಾರವಾಗಿ ಪೊಲೀಸರ ಕಿರುಕುಳ ಕೊಟ್ಟಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಮೈಲಾಪುರ ಗ್ರಾಮದ ಮಂಜುನಾಥ್(44) ಮೃತ ದುರ್ದೈವಿಯಾಗಿದ್ದು, ತೋಟದ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.
ಇದನ್ನೂ ಓದಿ: Rice series 81 | ತಿನ್ನೋಕೂ ಆಗ್ಬೇಕು-ಬಾಕ್ಸ್‌ಗೂ ತಗೊಂಡು ಹೋಗ್ಬೇಕಾ? ಪುದೀನಾ ಚಿತ್ರಾನ್ನಾ ಮಾಡಿನೋಡಿ
ತೋಟದ ಕೆಲಸಕ್ಕೆ ಬರುತ್ತಿದ್ದ ಅಶ್ವಿನಿ ಎಂಬಾಕೆ 8 ದಿನಗಳಿಂದ ನಾಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮಂಜುನಾಥ್ನನ್ನ ಪೊಲೀಸರು ವಿಚಾರಣೆಗೆ ಕರೆದಿದ್ದರು. ಮಹಿಳೆ ಜೊತೆ ಸಂಬಂಧ ಆರೋಪ ಹಿನ್ನೆಲೆ ವಿಚಾರಣೆ ನಡೆಸಲಾಗಿತ್ತು. ವಿಚಾರಣೆ ಮುಗಿಸಿ ಮನೆಗೆ ಬಂದಿದ್ದ ಅವರು ಶವವಾಗಿ ಪತ್ತೆಯಾಗಿದ್ದು, ತಂದೆ ಸಾವಿಗೆ ಪೊಲೀಸರೇ ಕಾರಣ ಎಂದು ಮಕ್ಕಳು ಆರೋಪಿಸಿದ್ದಾರೆ. ಕಾನ್ಸ್ಟೇಬಲ್ ಅಂಬರೀಶ್ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದ್ದು, ಕೊಲೆ ಮಾಡಿರುವ ಶಂಕೆ ಇದೆ ಎಂದು ಸಂಬಂಧಿಕರು ಹೇಳಿದ್ದಾರೆ.

