ನೀರಿಕ್ಷಿತ ಪ್ರಮಾಣದಲ್ಲಿ ಮುಂಗಾರು ಚುರುಕುಗೊಳ್ಳೋದು ಡೌಟ್‌ ! ಏನು ಹೇಳುತ್ತೆ ಹವಾಮಾನ ವರದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಚುರುಕುಗೊಳ್ಳುವ ಸಾಧ್ಯತೆ ಕ್ಷೀಣಿಸುತ್ತಿದ್ದು, ಮುಂದಿನ‌ ಒಂದೆರಡು ದಿನ ಕರಾವಳಿ ಭಾಗ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಯಲಿದೆ.

ಜೂ.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕಾಸರಗೋಡು, ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಉತ್ತರ ಕನ್ನಡದಲ್ಲಿ ಬಾರೀ ಮಳೆ ಇದ್ದರೆ, ಉಡುಪಿ, ದಕ್ಷಿಣ ಕನ್ನಡ ಮಳೆಯ ತೀವ್ರತೆ‌ ಒಂದಿಷ್ಟು ಕಡಿಮೆ ಇರಲಿದೆ.

ಶಿವಮೊಗ್ಗ, ಹಾವೇರಿ, ಗದಗ, ಕೊಪ್ಪಳ, ದಾವಣಗೆರೆ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕಲಬುರ್ಗಿ, ಬೀದರ್, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ದಕ್ಷಿಣ, ಬೆಂಗಳೂರಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಕೂಡಾ ಉತ್ತಮ ಮಳೆಯ ಮುನ್ಸೂಚನೆ ಇದೆ.

ಇನ್ನು ಕೊಡಗು, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ಮೈಸೂರು, ಚಾಮರಾಜನಗರ, ರಾಮನಗರ, ಉಳಿದ ತುಮಕೂರು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ ರಾಜ್ಯದ ಉಳಿದ ಭಾಗಗಳಲ್ಲಿ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!