Saturday, March 25, 2023

Latest Posts

ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಓಬಿಜಿ ವಿಭಾಗ ಉದ್ಘಾಟಿಸಿದ ಮನ್ಸುಖ್‌ ಮಾಂಡವೀಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಮುನ್ನಾದಿನ ರಾಜರಾಜೇಶ್ವರಿ ನಗರದಲ್ಲಿ ಓಬಿಜಿ ವಿಭಾಗ ಸೇವೆಗೆ ಲಭ್ಯವಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವೀಯ ಅವರು ಇಲ್ಲಿನ ರಾಜರಾಜೇಶ್ವರಿ ನಗರದಲ್ಲಿರುವ ಜಯದೇವ ಸ್ಮಾರಕ ರಾಷ್ಟ್ರೋತ್ಥಾನ ಆಸ್ಪತ್ರೆ ಮತ್ತು ಸಂಶೋಧನ ಸಂಸ್ಥೆಯಲ್ಲಿ (ಜೆ.ಎಂ.ಆರ್.ಎಚ್ & ಆರ್.ಸಿ) ಮಂಗಳವಾರ ಓಬಿಜಿ ವಿಭಾಗವನ್ನು (ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ) ಉದ್ಘಾಟಿಸಿದರು.

ಜೆ.ಎಂ.ಆರ್.ಎಚ್ & ಆರ್.ಸಿ.ಯ ಓಬಿಜಿ ವಿಭಾಗವು ಖ್ಯಾತ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾಗಿರುವ ಡಾ. ಲತಾ ವೆಂಕಟರಾಮ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದು, ಸಮಾಜದ ಎಲ್ಲ ವರ್ಗದವರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಒದಗಿಸುವುದು ಆಸ್ಪತ್ರೆಯ ಪ್ರಮುಖ ಧ್ಯೇಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!