ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ I.N.D.I.A ಬ್ಲಾಕ್ ಒಟ್ಟಾಗಿ ಸ್ಪರ್ಧಿಸಲಿದೆ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಕಾಂಗ್ರೆಸ್ ರಾಜ್ಯ ವಿಧಾನಸಭೆಯ 81 ಸ್ಥಾನಗಳಲ್ಲಿ 70 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ಘೋಷಿಸಿದ್ದಾರೆ.
ಉಳಿದ ಸ್ಥಾನಗಳಲ್ಲಿ I.N.D.I.A ಮೈತ್ರಿಕೂಟದ ಇತರ ಪಕ್ಷಗಳು ಸ್ಪರ್ಧಿಸಲಿವೆ ಮತ್ತು ಆರ್‌ಜೆಡಿ ಮತ್ತು ಎಡ ಪಕ್ಷಗಳೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ಸೋರೆನ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಜಾರ್ಖಂಡ್‌ನ ಕಾಂಗ್ರೆಸ್ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್ ಕೂಡ ಉಪಸ್ಥಿತರಿದ್ದರು.
“I.N.D.I.A ಬ್ಲಾಕ್ ಜಾರ್ಖಂಡ್ ಅಸೆಂಬ್ಲಿ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ 70 ಸ್ಥಾನಗಳನ್ನು ಜೆಎಂಎಂ ಮತ್ತು ಕಾಂಗ್ರೆಸ್ ಸ್ಪರ್ಧಿಸಲು ನಿರ್ಧರಿಸಲಾಗಿದೆ. ಉಳಿದ ಸ್ಥಾನಗಳ ಬಗ್ಗೆ ಮತ್ತಷ್ಟು ಚರ್ಚಿಸಲಾಗುವುದು” ಎಂದು ಸೋರೆನ್ ಹೇಳಿದರು.