Paris Olympics 2024 | ಒಂದೇ ಸೀಸನ್‌ನಲ್ಲಿ ಎರಡು ಪದಕ ಗೆದ್ದು ಸಾಧನೆ ಮಾಡಿದ ಮನು ಭಾಕರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಒಂದೇ ಸೀಸನ್‌ನಲ್ಲಿ ಎರಡು ಪದಕ ಗೆದ್ದು ಐತಿಹಾಸಿಕ ಸಾಧನೆಯನ್ನು ಮನು ಭಾಕರ್‌ ಮಾಡಿದ್ದಾರೆ.

ಭಾನುವಾರವಷ್ಟೇ 10 ಮೀಟರ್ ಮಹಿಳಾ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದ ಶೂಟರ್​ ಮನು ಭಾಕರ್​ ಇದೀಗ ಮತ್ತೊಂದು ಕಂಚಿನ ಪದಕ ಗೆದ್ದು ಐತಿಹಾಸಿಕ ಸಾಧನೆಯೊಂದನ್ನು ಮಾಡಿದ್ದಾರೆ.

ಮಂಗಳವಾರ ನಡೆದ 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್‌ ಸಿಂಗ್‌ ಜತೆಗೂಡಿ ಮನು ಭಾಕರ್​ ಕಂಚಿನ ಪದಕ ಗೆಲ್ಲುವ ಮೂಲಕ  ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎಂಬ ಐತಿಹಾಸಿಕ ಸಾಧನೆ ಮಾಡಿದರು. ಭಾರತೀಯ ಜೋಡಿ ದಕ್ಷಿಣ ಕೊರಿಯಾದ ಯೆ ಜಿನ್ ಒಹ್ ಮತ್ತು ವೊನೊಹೊ ಲೀ ವಿರುದ್ಧ  16-10 ಅಂಕಗಳಿಂದ ಗೆದ್ದು ಕಂಚಿನ ಪದಕ ತನ್ನದಾಗಿಸಿಕೊಂಡಿತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!