OLYMPICS | ಮನು ಭಾಕರ್‌ಗೆ ಮೂರನೇ ಪದಕ ಜಸ್ಟ್‌ ಮಿಸ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪ್ಯಾರಿಸ್ ಒಲಿಂಪಿಕ್ಸ್​ನ ಶೂಟಿಂಗ್​ ಸ್ಪರ್ಧೆಯಲ್ಲಿ ಮನು ಭಾಕರ್ 4ನೇ ಸ್ಥಾನ ಪಡೆದಿದ್ದಾರೆ.‌ ಭಾರತಕ್ಕೆ ಬರಬೇಕಿದ್ದ ಮೂರನೇ ಪದಕ ಜಸ್ಟ್‌ ಮಿಸ್‌ ಆಗಿದೆ.

ಫ್ರಾನ್ಸ್‌ನ ಚಟೌರೌಕ್ಸ್‌ನಲ್ಲಿ ನಡೆದ ಮಹಿಳೆಯರ 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಆರಂಭದಲ್ಲಿ ಮುನ್ನಡೆ ಪಡೆದಿದ್ದ ಮನು, ಎಲಿಮಿನೇಷನ್ ಸುತ್ತಿನಲ್ಲಿ 4ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಇದರೊಂದಿಗೆ ಮೂರನೇ ಪದಕ ಗೆಲ್ಲುವ ಅವರ ಕನಸು ಕಮರಿದೆ.

ಫೈನಲ್​ನಲ್ಲಿ ಮನು ಭಾಕರ್ 28 ಅಂಕಗಳೊಂದಿಗೆ 4ನೇ ಸ್ಥಾನ ಪಡೆದರೆ, ಕಂಚಿನ ಪದಕ ಗೆದ್ದ ಹಂಗೇರಿಯಾದ ಮೇಜರ್ ವೆರೋನಿಕಾ 31 ಪಾಯಿಂಟ್ಸ್ ಕಲೆಹಾಕಿದ್ದರು. ಅಂದರೆ ಕೇವಲ ಮೂರು ಅಂಕಗಳ ಅಂತರದಿಂದ ಮೂರನೇ ಪದಕ ಗೆಲ್ಲುವ ಅವಕಾಶವನ್ನು ಮನು ಭಾಕರ್ ಕೈಚೆಲ್ಲಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!