BIG NEWS | ಮನು ಭಾಕರ್‌, ಗುಕೇಶ್‌ ಸೇರಿದಂತೆ ನಾಲ್ವರಿಗೆ ಖೇಲ್‌ ರತ್ನ ಪ್ರಶಸ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಈ ಬಾರಿಯ ಖೇಲ್‌ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಶೂಟರ್‌ ಮನು ಭಾಕರ್‌, ವಲ್ಡ್‌ ಚಾಂಪಿಯನ್‌ ಗುಕೇಶ್‌ ಸೇರಿದಂತೆ ನಾಲ್ವರು ಕ್ರೀಡಾಸಾಧಕರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

Harmanpreet Singh 🇮🇳 (@13harmanpreet) / Xಕಳೆದ ವರ್ಷ ನಡೆದಿದ್ದ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ದೇಶಕ್ಕಾಗಿ ಎರಡು ಕಂಚಿನ ಪದಕಗಳನ್ನು ಗೆದ್ದುಕೊಟ್ಟಿದ್ದ ಮಹಿಳಾ ಶೂಟರ್ ಮನು ಭಾಕರ್, ವಿಶ್ವ ಚೆಸ್ ಚಾಂಪಿಯನ್​ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದ 18 ವರ್ಷದ ಚೆಸ್ ಚತುರ ಡಿ ಗುಕೇಶ್ ಹಾಗೂ ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಕೂಡ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

India's Praveen Kumar wins silver in high jump T64 at Tokyo Paralympicsಜನವರಿ 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ವಿಶೇಷವಾಗಿ ಆಯೋಜಿಸಲಾಗುವ ಸಮಾರಂಭದಲ್ಲಿ ಈ ನಾಲ್ವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!