ಹಿಮಾಚಲ ಪ್ರದೇಶದಲ್ಲಿ ಭೂಕುಸಿತಕ್ಕೆ ಮೂವರು ಬಲಿ, ಪ್ರವಾಹಕ್ಕೆ ತತ್ತರಿಸಿದ ಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್ 
ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಮಳೆಯಿಂದ ಉಂಟಾದ ಭೂಕುಸಿತ ಘಟನೆಯಲ್ಲಿ ಮನೆಯೊಂದು ಕುಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಬೆಳಿಗ್ಗೆ 4.30 ರ ಸುಮಾರಿಗೆ ಚೌವರಿ ತೆಹಸಿಲ್‌ನ ಬಾನೆಟ್ ಗ್ರಾಮದಲ್ಲಿ ಭೂಕುಸಿತ ಸಂಭವಿಸಿತು ಎಂದು ಚಂಬಾ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದ (ಡಿಇಒಸಿ) ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಹೆಚ್ಚಿನ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ಮಂಡಿಯಲ್ಲಿ, ಬೆಳಗಿನ ಜಾವ 4.15 ರ ವೇಳೆಗೆ ಹಠಾತ್ ಪ್ರವಾಹ ಕಾಣಿಸಿಕೊಂಡಿದೆ. ನಂತರ ಬಾಲ್, ಸದರ್, ಥುನಾಗ್, ಮಂಡಿ ಮತ್ತು ಲಮಾಥಾಚ್‌ನಲ್ಲಿ ಹಲವಾರು ಮನೆಗಳು ಮತ್ತು ಅಂಗಡಿಗಳಿಗೆ ನೀರು ನುಗ್ಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಂಗ್ರಾ, ಚಂಬಾ, ಮಂಡಿ, ಕುಲು, ಶಿಮ್ಲಾ, ಸಿರ್ಮೌರ್, ಸೋಲನ್, ಹಮೀರ್‌ಪುರ್, ಉನಾ ಮತ್ತು ಬಿಲಾಸ್‌ಪುರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮುಂದಿನ ಮೂರು-ನಾಲ್ಕು ದಿನಗಳಲ್ಲಿ ಮಳೆಯ ಪ್ರಮಾಣವು ಮುಂದಿನ 24 ಗಂಟೆಗಳಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!