Friday, June 2, 2023

Latest Posts

ನಳಿನ್‍ ಕುಮಾರ್ ಕಟೀಲ್ ಸಮ್ಮುಖದಲ್ಲಿ ಹಲವು ಮುಖಂಡರು ಬಿಜೆಪಿ ಸೇರ್ಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು: ಮಾಜಿ ಶಾಸಕ ನೇಮಿರಾಜ ನಾಯಕ್ ಅವರ ಉಪಸ್ಥಿತಿಯಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಕೊಟ್ಟೂರಿನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹರ್ಷವರ್ಧನ್, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಸುಧಾಕರ್ ಪಾಟೀಲ್ ಮತ್ತು ಹಲವು ಪ್ರಮುಖ ನಾಯಕರು ಇಂದು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ ಕುಮಾರ್ ಕಟೀಲ್, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣ ಅವರು ಉಪಸ್ಥಿತರಿದ್ದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಈ ಕಾರ್ಯಕ್ರಮ ನಡೆಯಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!