Thursday, August 18, 2022

Latest Posts

ಮನೆಮನೆಗೆ ಹೋಗಿ ಲಸಿಕೆ ಹಾಕಲು ಆರಂಭಿಸಿದ್ದರೆ ಅನೇಕ ಜೀವಗಳನ್ನು ಉಳಿಸಬಹುದಿತ್ತು: ಬಾಂಬೆ ಹೈಕೋರ್ಟ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………….

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೇಂದ್ರ ಸರ್ಕಾರವು ಕೆಲ ತಿಂಗಳುಗಳ ಹಿಂದೆಯೇ ಮನೆಮನೆಗೆ ಹೋಗಿ ಹಿರಿಯ ನಾಗರಿಕರಿಗೆ ಲಸಿಕೆ ಹಾಕಲು ಆರಂಭಿಸಿದ್ದರೆ ಅನೇಕ ಗಣ್ಯವ್ಯಕ್ತಿಗಳು ಸೇರಿದಂತೆ ಹಲವರ ಜೀವಗಳನ್ನು ಉಳಿಸಬಹುದಿತ್ತು ಎಂದು ಬಾಂಬೆ ಹೈಕೋರ್ಟ್ ಬುಧವಾರ ಹೇಳಿದೆ.
ಲಸಿಕೆ ಪಡೆಯಲು ಲಸಿಕೆ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದ ಹಿರಿಯ ನಾಗರಿಕರ ಜೀವನದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಜಿ ಎಸ್ ಕುಲಕರ್ಣಿ ಅವರ ವಿಭಾಗೀಯ ಪೀಠ, ಕೇಂದ್ರ ಸರ್ಕಾರ ಮನೆಮನೆಗೆ ಹೋಗಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ಏಕೆ ಪ್ರಾರಂಭಿಸಬಾರದು ಎಂದು ಪ್ರಶ್ನಿಸಿದೆ.
ಮನೆಗಳಲ್ಲಿ 75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು, ವಿಶೇಷ ಚೇತನ ವ್ಯಕ್ತಿಗಳು ಮತ್ತು ಹಾಸಿಗೆ ಹಿಡಿದ ಅಥವಾ ಗಾಲಿಕುರ್ಚಿಯಲ್ಲಿರುವವರಿಗೆ ಲಸಿಕೆ ಸೌಲಭ್ಯ ಕೋರಿ ಇಬ್ಬರು ವಕೀಲರಾದ ಧ್ರುತಿ ಕಪಾಡಿಯಾ ಮತ್ತು ಕುನಾಲ್ ತಿವಾರಿ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿತು.
ತನ್ನ ಹಿಂದಿನ ಏಪ್ರಿಲ್ 22 ರ ಆದೇಶವನ್ನು ಪುನರುಚ್ಚರಿಸಿದ ನ್ಯಾಯಾಲಯ, ಮನೆ-ಮನೆ-ಲಸಿಕೆ ಕಾರ್ಯಕ್ರಮವನ್ನು ಪ್ರಾರಂಭಿಸದಿರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರುಪರಿಶೀಲಿಸಬೇಕು ಎಂದು ಸೂಚಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!