ನನ್ನ ರಾಜೀನಾಮೆಗೆ ಬಹಳ ಜನ ಕಾಯುತ್ತಿದ್ದಾರೆ, ಆದ್ರೆ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ನನ್ನ ರಾಜೀನಾಮೆಗೆ ಬಹಳ ಜನ ಕಾಯುತ್ತಿದ್ದಾರೆ ಆದರೆ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ.

ಇತ್ತ ಬೆಂಗಳೂರಿನ ಯಲಹಂಕದಲ್ಲಿ ರಾಜ್ಯದ ಪ್ರಪ್ರಥಮ ನೈಸರ್ಗಿಕ ಅನಿಲ ಆಧಾರಿತ 370 ಮೆಗಾ ವ್ಯಾಟ್ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ನಾನು ರಾಜೀನಾಮೆ ಕೊಡಬೇಕಾ? ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ನಾನು ಫೈಟ್ ಮಾಡುತ್ತೇನೆ ಎಂದು ಅವರು ಮತ್ತೊಮ್ಮೆ ಸ್ಪಷ್ಟಣೆ ನೀಡಿದರು.

ನನ್ನ ರಾಜೀನಾಮೆಗೆ ಬಹಳ ಜನ ಕಾಯುತ್ತಿದ್ದಾರೆ.ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ ಎಂದು ಬಹಳ ಜನ ಕಾಯುತ್ತಿದ್ದಾರೆ. ಆದರೆ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ ಎಂದು ತಿಳಿಸಿದರು. ನಾನು ಹೋರಾಟದ ಹಿನ್ನೆಲೆಯಿಂದ ಬಂದಿರುವಂತಹವನು.ಸುಳ್ಳು ಆರೋಪಗಳಿಗೆ ಯಾವತ್ತು ಹೆದರಲ್ಲ ಅವುಗಳನ್ನು ಎಲ್ಲಾ ಎದರಿಸುತ್ತೇವೆ. ಹಾಗಾಗಿ ರಾಜೀನಾಮೆ ನೀಡುವ ಪ್ರಶ್ನೆ ಬಂದಿಲ್ಲ ರಾಜೀನಾಮೆ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!