ಜಮ್ಮು ಕಾಶ್ಮೀರದಲ್ಲಿ ಬೀದಿ ನಾಯಿಗಳ ದಾಳಿ; ಪ್ರವಾಸಿಗರು ಸೇರಿದಂತೆ 39 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಜಮ್ಮು ಕಾಶ್ಮೀರದ ದಾಲ್ಗೇಟ್ ಪ್ರದೇಶದಲ್ಲಿ ಬೀದಿ ನಾಯಿಗಳ ದಾಳಿಗೆ 17 ಪ್ರವಾಸಿಗರು ಸೇರಿದಂತೆ 39 ಜನರು ಗಾಯಗೊಂಡಿದ್ದಾರೆ.
ದಲ್ಗೇಟ್‌ನ ಬುಚ್ವಾರಾ ಪ್ರದೇಶದ ಘಾಟ್ ನಂ.5 ರಲ್ಲಿ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿ ಸ್ಥಳದಲ್ಲಿದ್ದವರನ್ನು ಗಾಯಗೊಳಿಸಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರದೇಶದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಯ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.
39 ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಆರೋಗ್ಯ ಸುಧಾರಗೆಗೊಂಡಿದೆ ಎಂದು ಎಸ್‌ಎಂಎಚ್‌ಎಸ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಕನ್ವಾಲ್ಜೀತ್ ಸಿಂಗ್ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!